ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೆಡಿಎಸ್‌ ಸಂಘಟನೆಗೆ ಏಳು ಸಮಿತಿ

Last Updated 18 ಜನವರಿ 2021, 19:16 IST
ಅಕ್ಷರ ಗಾತ್ರ

ಬೆಂಗಳೂರು: ಜೆಡಿಎಸ್‌ ಸಂಘಟನೆಗಾಗಿ ಏಳು ಸಮಿತಿಗಳನ್ನು ರಚಿಸಿ ಸೋಮವಾರ ಆದೇಶ ಹೊರಡಿಸಿದ್ದು, ಕಲ್ಯಾಣ ಕರ್ನಾಟಕ ಮತ್ತು ಬೆಳಗಾವಿ ವಿಭಾಗಗಳ ಮೇಲುಸ್ತುವಾರಿಯನ್ನು ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಅವರೇ ವಹಿಸಿಕೊಂಡಿದ್ದಾರೆ.

ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ. ದೇವೇಗೌಡ ನೇತೃತ್ವದಲ್ಲಿ ಪಕ್ಷದ ಪ್ರಧಾನ ಕಚೇರಿಯಲ್ಲಿ ಸೋಮವಾರ ನಡೆದ ಸಭೆಯಲ್ಲಿ ವಿವಿಧ ವಿಭಾಗಗಳ ಮುಖಂಡರ ಜತೆ ಚರ್ಚಿಸಿದ ಬಳಿಕ ಸಮಿತಿಗಳನ್ನು ನೇಮಿಸಲಾಗಿದೆ. ಮತಗಟ್ಟೆ ಹಂತದಿಂದ ರಾಜ್ಯಮಟ್ಟದವರೆಗೆ ವಿವಿಧ ಘಟಕಗಳು, ಸಮಿತಿಗಳ ಪದಾಧಿಕಾರಿಗಳನ್ನು ಚುನಾವಣೆ ಮೂಲಕ ಆಯ್ಕೆಮಾಡುವ ನಿರ್ಧಾರವನ್ನೂ ಕೈಗೊಳ್ಳಲಾಗಿದೆ.

ಮೈಸೂರು ವಿಭಾಗ ಮತ್ತು ಬೆಂಗಳೂರು ಮಹಾನಗರಕ್ಕೆ ಪ್ರತ್ಯೇಕ ಸಮಿತಿಗಳನ್ನು ರಚಿಸಲಾಗಿದೆ. ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಮತ್ತು ಕೊಡಗು ಜಿಲ್ಲೆಗಳ ವ್ಯಾಪ್ತಿ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳು ಹಾಗೂ ತುಮಕೂರು, ರಾಮನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಪ್ರತ್ಯೇಕ ಸಮಿತಿಗಳನ್ನು ನೇಮಿಸಲಾಗಿದೆ.

ಸಂಸದರು, ಶಾಸಕರು, ಮಾಜಿ ಸಚಿವರು, ಮಾಜಿ ಶಾಸಕರು ಮತ್ತು ಸ್ಥಳೀಯ ಮುಖಂಡರನ್ನು ಒಳಗೊಂಡ ವೀಕ್ಷಕರ ಸಮಿತಿಗಳನ್ನು ರಚಿಸಿ ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷ ಎಚ್‌.ಕೆ. ಕುಮಾರಸ್ವಾಮಿ ಆದೇಶ ಹೊರಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT