ಶುಕ್ರವಾರ, ಮೇ 20, 2022
27 °C

ಬಂಡೆಪ್ಪ ನೇತೃತ್ವದಲ್ಲಿ ಜೆಡಿಎಸ್‌ ಪ್ರಮುಖರ ಸಮಿತಿ ರಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಜೆಡಿಎಸ್‌ ಪಕ್ಷದ ಸಂಘಟನೆ, ಬಲವರ್ಧನೆ ಮತ್ತು ಚುನಾವಣೆಗೆ ಸಂಬಂಧಿಸಿದ ವಿಷಯಗಳ ಕುರಿತು ನಿರ್ಣಯ ಕೈಗೊಳ್ಳುವುದಕ್ಕಾಗಿ ಶಾಸಕ ಬಂಡೆಪ್ಪ ಕಾಶೆಂಪೂರ ಅಧ್ಯಕ್ಷತೆಯಲ್ಲಿ 20 ಸದಸ್ಯರ ‘ಪ್ರಮುಖರ ಸಮಿತಿ’ ರಚಿಸಲಾಗಿದೆ.

ಶಾಸಕರಾದ ವೆಂಕಟರಾವ್‌ ನಾಡಗೌಡ, ಸಿ.ಎಸ್‌. ಪುಟ್ಟರಾಜು, ಎಂ. ಕೃಷ್ಣಾ ರೆಡ್ಡಿ, ರಾಜಾ ವೆಂಕಟಪ್ಪ ನಾಯ್ಕ ದೊರೆ, ಸಂಸದ ಪ್ರಜ್ವಲ್‌ ರೇವಣ್ಣ, ರಾಜ್ಯಸಭೆ ಸದಸ್ಯ ಎಂ. ಕುಪೇಂದ್ರ ರೆಡ್ಡಿ, ವಿಧಾನ ಪರಿಷತ್‌ ಸದಸ್ಯರಾದ ಬಿ.ಎಂ. ಫಾರೂಕ್‌, ಕೆ.ಎ. ತಿಪ್ಪೇಸ್ವಾಮಿ, ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಜಫ್ರುಲ್ಲಾ ಖಾನ್‌, ಮಾಜಿ ಶಾಸಕರಾದ ವೈ.ಎಸ್‌.ವಿ. ದತ್ತ, ಕೆ.ಎಂ. ತಿಮ್ಮರಾಯಪ್ಪ, ಶಾರದಾ ಪೂರ‍್ಯಾನಾಯ್ಕ, ವಿಧಾನ ಪರಿಷತ್‌ನ ಮಾಜಿ ಸದಸ್ಯ ಟಿ.ಎ. ಶರವಣ, ಮುಖಂಡರಾದ ನಾಸೀರ್‌ ಭಗವಾನ್‌, ಹನುಮಂತ್ತಪ್ಪ ಬಸಪ್ಪ ಮಾವಿನಮರದ, ರೂತ್‌ ಮನೋರಮಾ, ಸುಧಾಕರ್‌ ಎಸ್‌. ಶೆಟ್ಟಿ., ವಿ. ನಾರಾಯಣಸ್ವಾಮಿ ಮತ್ತು ಸಮೃದ್ಧಿ ಮಂಜುನಾಥ್ ಅವರನ್ನು ಸದಸ್ಯರನ್ನಾಗಿ ನೇಮಿಸಿ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಎಚ್‌.ಕೆ. ಕುಮಾರಸ್ವಾಮಿ ಬುಧವಾರ ಆದೇಶ ಹೊರಡಿಸಿದ್ದಾರೆ.

ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ. ದೇವೇಗೌಡ, ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಮತ್ತು ಎಚ್‌.ಕೆ. ಕುಮಾರಸ್ವಾಮಿ ಪ್ರಮುಖರ ಸಮಿತಿಯ ವಿಶೇಷ ಆಹ್ವಾನಿತರಾಗಿದ್ದಾರೆ.

ಕಾರ್ಯಾಧ್ಯಕ್ಷರಾಗಿ ಎಂ.ಎನ್‌. ನಬಿ

ಮಾಜಿ ಸಚಿವ ಎಂ.ಎನ್‌. ನಬಿ ಅವರನ್ನು ಜೆಡಿಎಸ್‌ ರಾಜ್ಯ ಘಟಕದ ಕಾರ್ಯಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.

ಶಾಸಕ ರಾಜಾ ವೆಂಕಟಪ್ಪ ನಾಯ್ಕ ದೊರೆ ಅವರನ್ನು ಜೆಡಿಎಸ್‌ ರಾಜ್ಯ ಪರಿಶಿಷ್ಟ ಪಂಗಡಗಳ ವಿಭಾಗದ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು