ಬೆಂಗಳೂರು: 'ಸೂಟ್ ಕೇಸ್ ಸಂಸ್ಕೃತಿ ಜೆಡಿಎಸ್ ಪಕ್ಷದಲ್ಲಿದೆ. ಬಿಜೆಪಿಯಲ್ಲಿ ಹಣ ಕೊಡುವ ಮತ್ತು ಪಡೆಯುವ ಸಂಸ್ಕೃತಿ ಇಲ್ಲ' ಎಂದು ಕಂದಾಯ ಸಚಿವ ಆರ್. ಅಶೋಕ ಹೇಳಿದರು.

'ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಸೂಟ್ ಕೇಸ್ ಪಡೆಯಲು ಆಗಾಗ ರಾಜ್ಯಕ್ಕೆ ಬರುತ್ತಾರೆ' ಎಂಬ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, 'ಅರುಣ್ ಸಿಂಗ್ ಪಕ್ಷ ಸಂಘಟನೆಗಾಗಿ ಭೇಟಿ ನೀಡುತ್ತಿದ್ದಾರೆ. ಅವರ ವಿರುದ್ಧ ಹಣ ಪಡೆದ ಆರೋಪ ಮಾಡಿ ಕುಮಾರಸ್ವಾಮಿ ಹೇಳಿಕೆ ನೀಡಿರುವುದು ಖಂಡನೀಯ' ಎಂದರು.

ಶಾ ಹೇಳಿಕೆಗೆ ಬೆಂಬಲ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿಯು ಮುಂದಿನ ವಿಧಾನಸಭಾ ಚುನಾವಣೆ ಎದುರಿಸಲಿದೆ ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆಗೆ ತಮ್ಮ ಬೆಂಬಲವಿದೆ ಎಂದು ಅಶೋಕ ಹೇಳಿದರು.

ಮುಖ್ಯಮಂತ್ರಿ ನಾಯಕತ್ವದಲ್ಲಿ ಚುನಾವಣೆ ಎದುರಿಸುವುದು ಸಹಜವಾದ ಪ್ರಕ್ರಿಯೆ. ಅಮಿತ್ ಶಾ ಹೇಳಿಕೆ ಸರಿಯಾಗಿಯೇ ಇದೆ. ಅದಕ್ಕೆ ತಮ್ಮ ಸಮರ್ಥನೆ ಇದೆ ಎಂದರು.

'ಬಿ.ಎಸ್. ಯಡಿಯೂರಪ್ಪ ಅವರು ನಮ್ಮೆಲ್ಲರ ನಾಯಕ. ಅವರು ಪಕ್ಷದ ನಾಯಕರ ಜತೆ ಚರ್ಚಿಸಿದ ಬಳಿಕ, ರಾಜ್ಯ ಪ್ರವಾಸ ಕೈಗೊಳ್ಳುವ ಕುರಿತು ನಿರ್ಧರಿಸಲಿದ್ದಾರೆ' ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.