ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈತ್ರಿ ಕುರಿತು ಎಚ್‌ಡಿಕೆ–ಬಿಎಸ್‌ವೈ ಅಂತಿಮ ತೀರ್ಮಾನ: ದೇವೇಗೌಡ ಹೇಳಿಕೆ

Last Updated 1 ಡಿಸೆಂಬರ್ 2021, 3:58 IST
ಅಕ್ಷರ ಗಾತ್ರ

ಬೆಂಗಳೂರು: ವಿಧಾನಪರಿಷತ್ ಚುನಾವಣೆಯಲ್ಲಿ ಜೆಡಿಎಸ್‌–ಬಿಜೆಪಿ ಮೈತ್ರಿ ವಿಚಾರವನ್ನು ಎಚ್‌.ಡಿ.ಕುಮಾರಸ್ವಾಮಿ ಮತ್ತು ಬಿ.ಎಸ್‌.ಯಡಿಯೂರಪ್ಪ ಅವರಿಗೆ ಬಿಟ್ಟಿದ್ದು, ಯಾವುದೇ ಗೊಂದಲ ಆಗದಂತೆ ತೀರ್ಮಾನ ತೆಗೆದುಕೊಳ್ಳಲಿದ್ದಾರೆ ಎಂದು ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ.ದೇವೇಗೌಡರು ಹೇಳಿದರು.

ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮಂಗಳವಾರ ಭೇಟಿಯಾದ ಬಳಿಕ ಸುದ್ದಿಗಾರರ ಜತೆ ಅವರು ಮಾತನಾಡಿದರು. ಪರಿಷತ್‌ ಚುನಾವಣೆಯ ಮೈತ್ರಿ ಬಗ್ಗೆ ಬಿಜೆಪಿ ನಾಯಕರು ಏನು ತೀರ್ಮಾನ ತೆಗೆದುಕೊಳ್ಳುತ್ತಾರೋ ನೋಡೋಣ. ಮುಂದಿನ ಚುನಾವಣೆಗೆ ಮೈತ್ರಿ ಮುಂದುವರಿಸುವ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಎಂದರು.

‘ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಜೆಡಿಎಸ್‌ ಜತೆ ಹೊಂದಾಣಿಕೆ ಮಾಡಿಕೊಳ್ಳಬೇಕು ಎಂಬ ಮನಸ್ಸಿದೆ. ಆದರೆ, ಬೇರೆ ನಾಯಕರಿಗೆ ಮನಸ್ಸಿಲ್ಲ. ಖರ್ಗೆಯವರ ಮಾತು ಎಷ್ಟು ನಡೆಯುತ್ತದೆ? ಕಾಂಗ್ರೆಸ್‌ ಹೈಕಮಾಂಡ್‌ ನಿರ್ಧಾರ ಏನಿದೆಯೋ ಗೊತ್ತಿಲ್ಲ. ಮೈತ್ರಿ ಮಾಡಿಕೊಳ್ಳಿ ಎಂದು ನಾವೇ ಮೇಲೆ ಬಿದ್ದು ಹೇಳಲು ಆಗಲ್ಲ’ ಎಂದು ದೇವೇಗೌಡರು ಪ್ರತಿಪಾದಿಸಿದರು.

‘ಬಿಬಿಎಂಪಿಯಲ್ಲಿ ನಾವು ಕಾಂಗ್ರೆಸ್‌ಗೆ ಬೆಂಬಲ ನೀಡಿದ್ದೆವು. ಅದರಿಂದ ಕಾಂಗ್ರೆಸ್‌ನವರು ಮೇಯರ್‌ ಆಗಿದ್ದರು. ನಮ್ಮ ಪಕ್ಷಕ್ಕೆ ಉಪಮೇಯರ್ ಸ್ಥಾನ ಸಿಕ್ಕಿತ್ತು. ಈಗ ಕಾಂಗ್ರೆಸ್‌ನವರು ಅದನ್ನೆಲ್ಲ ಮರೆತಿರಬಹುದು’ ಎಂದೂ ತಿಳಿಸಿದರು.

ಮೈತ್ರಿ ತೀರ್ಮಾನ ಮಾಡಿಲ್ಲ: ಎಚ್‌ಡಿಕೆ ‘ವಿಧಾನಪರಿಷತ್ ಚುನಾವಣೆಯಲ್ಲಿ ಬೆಂಬಲ ನೀಡುವಂತೆ ಮಾಧ್ಯಮಗಳ ಮೂಲಕ ಬಿ.ಎಸ್‌.ಯಡಿಯೂರಪ್ಪ ಮನವಿ ಮಾಡಿದ್ದಾರೆ. ಅವರು ಈ ಬಗ್ಗೆ ನನ್ನ ಜತೆ ವೈಯಕ್ತಿಕವಾಗಿ ಪ್ರಸ್ತಾಪ ಮಾಡದೇ ಇದ್ದರೂ ಸೌಜನ್ಯ ತೋರಿದ್ದಾರೆ. ಆದರೆ, ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರು ಜೆಡಿಎಸ್‌ ಬೆಂಬಲ ಬೇಡವೇ ಬೇಡ ಎಂದಿದ್ದಾರೆ. ನಾವು ಮೈತ್ರಿಯ ಬಗ್ಗೆ ತೀರ್ಮಾನ ಮಾಡಿಲ್ಲ. ನಮ್ಮ ಗುರಿ ಏನಿದ್ದರೂ 2023ರ ವಿಧಾನಸಭೆ ಚುನಾವಣೆ. ಅದನ್ನು ದೃಷ್ಟಿಯಲ್ಲಿಟ್ಟುಕೊಂಡು ಸಂದರ್ಭ ನೋಡಿ ತೀರ್ಮಾನ ತೆಗೆದುಕೊಳ್ಳುತ್ತೇವೆ’ ಎಂದು ಎಚ್‌.ಡಿ.ಕುಮಾರಸ್ವಾಮಿ ‘ಪ್ರಜಾವಾಣಿ’ಗೆ ತಿಳಿಸಿದರು.

ಮೈತ್ರಿ ತೀರ್ಮಾನ ಮಾಡಿಲ್ಲ: ಎಚ್‌ಡಿಕೆ

‘ವಿಧಾನಪರಿಷತ್ ಚುನಾವಣೆಯಲ್ಲಿ ಬೆಂಬಲ ನೀಡುವಂತೆ ಮಾಧ್ಯಮಗಳ ಮೂಲಕ ಬಿ.ಎಸ್‌.ಯಡಿಯೂರಪ್ಪ ಮನವಿ ಮಾಡಿದ್ದಾರೆ. ಅವರು ಈ ಬಗ್ಗೆ ನನ್ನ ಜತೆ ವೈಯಕ್ತಿಕವಾಗಿ ಪ್ರಸ್ತಾಪ ಮಾಡದೇ ಇದ್ದರೂ ಸೌಜನ್ಯ ತೋರಿದ್ದಾರೆ. ಆದರೆ, ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರು ಜೆಡಿಎಸ್‌ ಬೆಂಬಲ ಬೇಡವೇ ಬೇಡ ಎಂದಿದ್ದಾರೆ. ನಾವು ಮೈತ್ರಿಯ ಬಗ್ಗೆ ತೀರ್ಮಾನ ಮಾಡಿಲ್ಲ. ನಮ್ಮ ಗುರಿ ಏನಿದ್ದರೂ 2023ರ ವಿಧಾನಸಭೆ ಚುನಾವಣೆ. ಅದನ್ನು ದೃಷ್ಟಿಯಲ್ಲಿಟ್ಟುಕೊಂಡು ಸಂದರ್ಭ ನೋಡಿ ತೀರ್ಮಾನ ತೆಗೆದುಕೊಳ್ಳುತ್ತೇವೆ’ ಎಂದು ಎಚ್‌.ಡಿ.ಕುಮಾರಸ್ವಾಮಿ ‘ಪ್ರಜಾವಾಣಿ’ಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT