ಶುಕ್ರವಾರ, ನವೆಂಬರ್ 27, 2020
20 °C

ಮುನಿರತ್ನ ತಮ್ಮನ್ನೇ ಮಾರಿಕೊಂಡವರು‌: ಕೃಷ್ಣಮೂರ್ತಿ ವಿ.

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಬಿಜೆಪಿ ಅಭ್ಯರ್ಥಿ ಮುನಿರತ್ನ ₹ 50 ಕೋಟಿಯಿಂದ ₹ 60 ಕೋಟಿಗೆ ತಮ್ಮನ್ನು ತಾವು ಮಾರಿಕೊಂಡಿ
ದ್ದಾರೆ. ಮತ್ತೆ ಜನರ ಬಳಿ ಬಂದು ಮತ ಕೇಳುವ ನೈತಿಕತೆ ಅವರಿಗೆ ಇಲ್ಲ’ ಎಂದು ಆರ್‌.ಆರ್‌.ನಗರದ ಜೆಡಿಎಸ್‌ ಅಭ್ಯರ್ಥಿ ಕೃಷ್ಣಮೂರ್ತಿ ವಿ. ವಾಗ್ದಾಳಿ ನಡೆಸಿದರು.

ಯಶವಂತಪುರ ವಾರ್ಡ್‌ನಲ್ಲಿ ಸೋಮವಾರ ನಡೆದ ಜೆಡಿಎಸ್‌ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ‘ಶಾಸಕರಾಗಿದ್ದ ಅವಧಿಯಲ್ಲಿ ಮಾಡಿದ್ದ ತಪ್ಪುಗಳನ್ನು ಮುಚ್ಚಿಕೊಳ್ಳಲು ಮುನಿರತ್ನ ಬಿಜೆಪಿಗೆ ಹೋಗಿದ್ದಾರೆ’ ಎಂದು ಟೀಕಿಸಿದರು.

ಎರಡೂ ರಾಷ್ಟ್ರೀಯ ಪಕ್ಷಗಳು ಜೆಡಿಎಸ್‌ ಕಾರ್ಯಕರ್ತರನ್ನು ಸೆಳೆಯಲು ಪ್ರಯತ್ನ ನಡೆಸುತ್ತಿವೆ. ಪಕ್ಷದ ಕಾರ್ಯಕರ್ತರು ಯಾವುದೇ ಆಮಿಷಕ್ಕೆ ಒಳಗಾಗದೇ ಒಗ್ಗಟ್ಟು ಪ್ರದರ್ಶಿಸಬೇಕು ಎಂದು ಮನವಿ ಮಾಡಿದರು.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು