ಸೋಮವಾರ, ಅಕ್ಟೋಬರ್ 26, 2020
23 °C

ಜೆಡಿಎಸ್‌ ಮುಗಿಸುವುದೇ ಕಾಂಗ್ರೆಸ್‌ ಕಾರ್ಯಸೂಚಿ: ಎಚ್‌.ಡಿ. ಕುಮಾರಸ್ವಾಮಿ ಆರೋಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ‘ಜೆಡಿಎಸ್‌ ಪಕ್ಷವನ್ನು ಮುಗಿಸಬೇಕು ಎಂಬುದೇ ಕಾಂಗ್ರೆಸ್‌ ನಾಯಕರ ಕಾರ್ಯಸೂಚಿ. ಅವರಿಗೆ ಬಿಜೆಪಿಗಿಂತ ಜೆಡಿಎಸ್‌ ಪಕ್ಷದ ಮೇಲೆ ಹೆಚ್ಚು ಸಿಟ್ಟಿದೆ’ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಆರೋಪಿಸಿದರು.

ಆರ್‌.ಆರ್‌. ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಲಗ್ಗೆರೆಯಲ್ಲಿ ಭಾನುವಾರ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ‘ಭಯವೊ, ಆಕ್ರೋಶವೊ ಗೊತ್ತಿಲ್ಲ. ಕಾಂಗ್ರೆಸ್‌ ನಾಯಕರು ನಮ್ಮ ಪಕ್ಷವನ್ನು ಮುಗಿಸುವ ಕಾರ್ಯಸೂಚಿಯಲ್ಲೇ ಕೆಲಸ ಮಾಡುತ್ತಿದ್ದಾರೆ’ ಎಂದರು.

‘ಇಡೀ ದೇಶದಲ್ಲಿ ಸಾರ್ವಜನಿಕವಾಗಿ ಕಣ್ಣೀರು ಹಾಕಿದ ಮುಖ್ಯಮಂತ್ರಿ ನಾನು ಮಾತ್ರ. ಅಂಥ ವಾತಾವರಣ ದಲ್ಲಿ ನಾನು ಕೆಲಸ ಮಾಡುತ್ತಿದ್ದೆ. ದೇವೇಗೌಡರ ಕುಟುಂಬವನ್ನು ಹಣ ಕೊಟ್ಟು ಖರೀದಿಸಲು ಯಾರಿಂದಲೂ ಸಾಧ್ಯವಿಲ್ಲ’ ಎಂದು ಹೇಳಿದರು.

‘ಆರ್‌.ಆರ್‌.ನಗರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕುರಿತು ಕುಮಾರಸ್ವಾಮಿ ಮೃದು ಧೋರಣೆ ತಳೆದಿದ್ದಾರೆ ಎಂಬ ಅಪಪ್ರಚಾರ ನಡೆದಿದೆ. ಪಕ್ಷ ಇಲ್ಲಿ ಪ್ರಬಲ ಸ್ಪರ್ಧೆ ನಡೆಸುತ್ತಿದೆ’ ಎಂದು ಅವರು ಹೇಳಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು