ವಿಜಯಪುರ: ‘ಜೆಡಿಎಸ್ ಉದ್ದೇಶ ಏನೇ ಇದ್ದರೂ ಬುದ್ಧಿವಂತ ಮತದಾರರು ಅವರಿಗೆ ಮತ ಹಾಕುವುದಿಲ್ಲ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಲೇವಡಿ ಮಾಡಿದರು.

ಸಿಂದಗಿಯಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಉಪ ಚುನಾವಣೆಯು ಕಾಂಗ್ರೆಸ್‌ಗೆ ಬಯಸದೆ ಬಂದ ಭಾಗ್ಯ. ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ’ ಎಂದರು.

ಬಿಜೆಪಿ ನೇತೃತ್ವದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ದುರಾಡಳಿತದಿಂದ ಬೇಸತ್ತಿರುವ ಮತದಾರರು ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರು, ‘ದಿ.ಎಂ.ಸಿ.ಮನಗೂಳಿ ಅವರು ನನ್ನ ಮತ್ತು ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ತಮ್ಮ ಪುತ್ರ ಅಶೋಕನನ್ನು ಕಾಂಗ್ರೆಸ್‌ಗೆ ಸೇರಿಸಿಕೊಂಡು ಬೆಳೆಸಲು ಮನವಿ ಮಾಡಿದ್ದರು. ಅವರ ಆಶಯದಂತೆ ಸೇರ್ಪಡೆ ಮಾಡಿಕೊಂಡು ಅಶೋಕ್ ಅವರಿಗೆ ಟಿಕೆಟ್ ನೀಡಿದ್ದೇವೆ. ಅವರ ಗೆಲ್ಲಿಸುವ ಜವಾಬ್ದಾರಿ ನಮ್ಮದು’ ಎಂದರು.

‘ಈ ಉಪಚುನಾವಣೆ ಬಿಜೆಪಿ ಸರ್ಕಾರಗಳ ವೈಫಲ್ಯಕ್ಕೆ ತಕ್ಕ ಪಾಠ ಕಲಿಸಲು ಬಂದಿದೆ. ಸಿಂದಗಿ ಮತ್ತು ಹಾನಗಲ್ ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್ 25 ಸಾವಿರ ಮತಗಳ ಅಂತರದಿಂದ ಗೆಲ್ಲಲಿದೆ’ ಎಂದು ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.