ಮೈಸೂರು: ‘ಹಣದ ಮೇಲೆ ರಾಜಕಾರಣ ಮಾಡುವುದು ಜೆಡಿಎಸ್ ಸಂಸ್ಕೃತಿ’ ಎಂದು ಬಿಜೆಪಿ ರಾಜ್ಯ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಬುಧವಾರ ಇಲ್ಲಿ ತಿರುಗೇಟು ನೀಡಿದರು.

‘ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರು ಹಣ ವಸೂಲಿಗಾಗಿ ಆಗಾಗ್ಗೆ ರಾಜ್ಯಕ್ಕೆ ಬರುತ್ತಿರುತ್ತಾರೆ’ ಎಂಬ ಎಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿ, ‘ತಮ್ಮ ಅನುಭವವನ್ನು ಕುಮಾರಸ್ವಾಮಿ ಹೇಳಿಕೊಂಡಿದ್ದಾರೆ. ಕಾಮಾಲೆ ಕಣ್ಣಿಗೆ ಎಲ್ಲವೂ ಹಳದಿಯಾಗಿ ಕಾಣುತ್ತದೆ. ರಾಜ್ಯ, ದೇಶ ಆಳಿದ ಇವರ ನಾಲಿಗೆ ಸರಿಯಾಗಿದ್ದಿದ್ದರೆ ಜೆಡಿಎಸ್‌ಗೆ ಇಂಥ ಪರಿಸ್ಥಿತಿ ಬರುತ್ತಿರಲಿಲ್ಲ. ಈ ಪಕ್ಷದ ಪರಿಸ್ಥಿತಿ ಏನೆಂಬುದು ಇಡೀ ರಾಜ್ಯದ ಜನರಿಗೆ ಗೊತ್ತಿದೆ’ ಎಂದರು.

ಬೆಲೆ ಏರಿಕೆ ಕುರಿತ ಪ್ರಶ್ನೆಗೆ, ‘ಯುಪಿಎ ಕಾಲಘಟ್ಟಕ್ಕೂ ಈಗಿನ ಪರಿಸ್ಥಿತಿಗೂ ಹೋಲಿಕೆ ಮಾಡಬೇಕು. ಬೆಲೆ ಏರಿಕೆ ನಿಯಂತ್ರಿಸಲು ನಮ್ಮ ಸರ್ಕಾರ ಪ್ರಯತ್ನಿಸುತ್ತಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿನ ಏರುಪೇರಿನಿಂದ ವ್ಯತ್ಯಾಸವಾಗುತ್ತಿದೆ’ ಎಂದು ಉತ್ತರಿಸಿದರು.

ತಮಿಳುನಾಡಿಗೆ ನೀರು ಹರಿಸಲು ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಸೂಚಿಸಿರುವ ಕುರಿತು, ‘ನೆಲ, ಜಲ, ಭಾಷೆ ರಕ್ಷಣೆಗೆ ಬಿಜೆಪಿ ಕಟಿಬದ್ಧವಾಗಿದೆ’ ಎಂದಷ್ಟೇ ಪ್ರತಿಕ್ರಿಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.