ಚುನಾವಣೆಗಳಲ್ಲಿ ಸತತ ಹಿನ್ನಡೆ
ಜೆಡಿಎಸ್ ಅವಲೋಕನ ಸಭೆ ಇಂದು

ಬೆಂಗಳೂರು: ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗಳು, ವಿಧಾನ ಪರಿಷತ್ ಚುನಾವಣೆಗಳು ಸೇರಿದಂತೆ ಇತ್ತೀಚಿನ ಬಹುತೇಕ ಚುನಾವಣೆಗಳಲ್ಲಿ ಪಕ್ಷಕ್ಕೆ ತೀವ್ರ ಹಿನ್ನಡೆ ಆಗಿರುವ ಕುರಿತು ಚರ್ಚಿಸಲು ಗುರುವಾರ ಜೆಡಿಎಸ್ ಅವಲೋಕನ ಸಭೆ ನಡೆಯಲಿದೆ.
ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಸಭೆಯ ನೇತೃತ್ವ ವಹಿಸಲಿದ್ದು, ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ, ರಾಜ್ಯ ಘಟಕದ ಅಧ್ಯಕ್ಷ ಎಚ್.ಕೆ. ಕುಮಾರಸ್ವಾಮಿ ಸೇರಿದಂತೆ ಪ್ರಮುಖರು ಮಾತನಾಡಲಿದ್ದಾರೆ ಎಂದು ಪಕ್ಷದ ಪ್ರಕಟಣೆ ತಿಳಿಸಿದೆ.
ಪಕ್ಷದಿಂದ ಆಯ್ಕೆಯಾಗಿರುವ ಲೋಕಸಭಾ ಸದಸ್ಯರು, ರಾಜ್ಯಸಭಾ ಸದಸ್ಯರು, ವಿಧಾನಸಭೆ ಮತ್ತು ವಿಧಾನ ಪರಿಷತ್ ಸದಸ್ಯರು ಹಾಗೂ ಜೆಡಿಎಸ್ ಜಿಲ್ಲಾ ಘಟಕಗಳ ಅಧ್ಯಕ್ಷರಿಗೆ ಸಭೆಗೆ ಆಹ್ವಾನ ನೀಡಲಾಗಿದೆ.
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.