ಶನಿವಾರ, ಆಗಸ್ಟ್ 13, 2022
26 °C

ಇಂದಿನಿಂದ ಜೆಡಿಎಸ್‌ ಜನತಾಮಿತ್ರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಜೆಡಿಎಸ್‌ ಜನತಾಮಿತ್ರ ಕಾರ್ಯಕ್ರಮ ಜುಲೈ 1ರಂದು ರಾಜಧಾನಿಯಲ್ಲಿ ಆರಂಭಗೊಳ್ಳಲಿದೆ ಎಂದು ವಿಧಾನಸಭೆಯಲ್ಲಿ ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರ ಸ್ವಾಮಿ ತಿಳಿಸಿದರು.

ಕಾರ್ಯಕ್ರಮಕ್ಕೆ 15 ವಿಶೇಷವಾಹನ ಸಿದ್ಧವಾಗಿವೆ. ನಗರದ 28 ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ವಾರ್ಡ್‌ಗೂ ಈ ವಾಹನ ತೆರಳಲಿದ್ದು, ಜೆ.ಪಿ. ಭವನದಲ್ಲಿ ಶುಕ್ರವಾರ ಹಸಿರು ನಿಶಾನೆ ತೋರಲಾಗುವುದು ಎಂದು ಪತ್ರಿಕಾಗೋಷ್ಠಿಯಲ್ಲಿ ಗುರುವಾರ ತಿಳಿಸಿದರು.

ಜನರು ತಮ್ಮ ನಿರೀಕ್ಷೆಯ ಸರ್ಕಾರ ಹೇಗಿರಬೇಕು ಎಂಬ ಬಗ್ಗೆ ಸಲಹೆ ನೀಡಬಹುದು ಎಂದು ಹೇಳಿದರು.

ದೇಶ ಹಾಗೂ ರಾಜ್ಯದಲ್ಲಿರುವ ಪರಿಸ್ಥಿತಿ, ಬೆಂಗಳೂರಿಗೆ ಯಾರು, ಯಾವ ಕೊಡುಗೆ ಕೊಟ್ಟಿದ್ದಾರೆ ಅನ್ನುವ ದಾಖಲೆ ಕೊಡಲಾಗುವುದು ಎಂದು ತಿಳಿಸಿದರು.

ಜುಲೈ 17ರ ವರೆಗೂ ಜನತಾ ಮಿತ್ರ ಕಾರ್ಯಕ್ರಮ ನಡೆಯಲಿದೆ ಎಂದರು.

’ಜಿಲ್ಲಾ ಘಟಕ ಅಧ್ಯಕ್ಷರು, ಶಾಸಕರ ಸಭೆ ಕರೆದಿದ್ದೇವೆ. ಪಕ್ಷದ ಸಂಘಟನೆ ಹಾಗೂ ಪಂಚರತ್ನ ರಥಯಾತ್ರೆ ಕುರಿತು ಚರ್ಚೆ ನಡೆಸಲಾಗುವುದು‘ ಎಂದರು. 

ಶಾಸಕರಾದ ಗೌರಿಶಂಕರ್, ಮಂಜುನಾಥ್, ಮುಖಂಡರಾದ ಎನ್.ಬಿ.ನಬಿ, ಎಚ್.ಎಂ.ರಮೇಶ್ ಗೌಡ, ಜೆಡಿಎಸ್ ನಗರ ಅಧ್ಯಕ್ಷ ಆರ್.ಪ್ರಕಾಶ್ ಹಾಜರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.