ಬೆಂಗಳೂರು: ‘ಎಲ್ಲರ ಹೃನ್ಮನಗಳಲ್ಲಿ ನೆಲೆಸಿರುವ ರಾಮನ ತತ್ವಾದರ್ಶಗಳಿಗೆ ಮಂದಿರವು ಸಂಕೇತವಾಗಲಿ. ಭಾರತದ ಹೆಗ್ಗುರುತಾಗಲಿ. ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುವ ರಾಮನ ಜನಪರ ಕಾಳಜಿ ಹಾಗೂ ಹೃದಯ ವೈಶಾಲ್ಯ ಈಗಿನ ನಮ್ಮ ಜನಪ್ರತಿನಿಧಿಗಳಿಗೆ ಮೇರು ಪ್ರೇರಣೆಯಾಗಲಿ’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ಕಾರ್ಯಕ್ರಮದ ಕುರಿತು ಟ್ವೀಟ್ ಮಾಡಿರುವ ಅವರು, ‘ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗಬೇಕೆಂಬ ಭಾರತೀಯರ ಶತಮಾನಗಳ ಕನಸು ನನಸಾಗಲು ಇಂದು ಕಾಲ ಕೂಡಿಬಂದಿದೆ. ಇದು ನಮ್ಮೆಲ್ಲರ ಸಂತೋಷದ ಘಳಿಗೆ. ಅದಕ್ಕೂ ಮಿಗಿಲಾಗಿ ಇದು ಭಾವನಾತ್ಮಕ ಸನ್ನಿವೇಶವೆಂಬುದು ನನ್ನ ಅನಿಸಿಕೆ’ ಎಂದು ಉಲ್ಲೇಖಿಸಿದ್ದಾರೆ.

‘ಅಯೋಧ್ಯೆಯಲ್ಲಿ ಮಂದಿರವೊಂದನ್ನು ಕಟ್ಟಿಕೊಳ್ಳಲು ಭಾರತೀಯರಾದ ನಾವು ಕಾನೂನಾತ್ಮಕ ಹೋರಾಟ ನಡೆಸಬೇಕಾಗಿದ್ದು, ಅದು ಕೆಲವರಿಗೆ ರಾಜಕೀಯ ದಾಳವಾಗಿದ್ದು, ಅಧಿಕಾರಕ್ಕೇರಲು ಏಣಿಯಾಗಿದ್ದು ನಮ್ಮ ಕೆಟ್ಟ ಘಳಿಗೆಗಳಲ್ಲಿ ಒಂದು. ಈ ದೇಗುಲವು ಸಾಮರಸ್ಯದ ಸಂಕೇತವಾಗಿ ಉಳಿಯಲಿ. ಈ ಮೂಲಕ ಸ್ವಾರ್ಥ ನಶಿಸಲಿ. ಎಲ್ಲರಿಗೂ ಶುಭ ತರಲಿ’ ಎಂದು ಅವರು ಮತ್ತೊಂದು ಟ್ವೀಟ್ನಲ್ಲಿ ಉಲ್ಲೇಖಿಸಿದ್ದಾರೆ.

‘ರಾಮಮಂದಿರ ನಿರ್ಮಾಣ ಸಾಂಸ್ಕೃತಿಕ ಪರಂಪರೆಯ ಬೆಸುಗೆ ಹಾಗೂ ರಾಷ್ಟ್ರೀಯ ಏಕತೆಯ ಪ್ರತಿಬಿಂಬವಾಗಲಿ ಎಂಬ ಆಶಯ ನನ್ನದು. ಜೈ ಶ್ರೀರಾಮ’ ಎಂದು ಅವರು ಉಲ್ಲೇಖಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.