ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡೋಂಗಿ ಜಾತ್ಯತೀತ ನಾಯಕರಿಗೆ ತಕ್ಕ ಪಾಠ: ಕುಮಾರಸ್ವಾಮಿ

ಸಿದ್ದರಾಮಯ್ಯ ವಿರುದ್ಧ ಎಚ್‌ಡಿಕೆ ಮತ್ತೆ ವಾಗ್ದಾಳಿ
Last Updated 24 ಮೇ 2022, 18:27 IST
ಅಕ್ಷರ ಗಾತ್ರ

ಬೆಂಗಳೂರು: ‘ಕಾಂಗ್ರೆಸ್ ಪಕ್ಷದ ಡೋಂಗಿ ಜಾತ್ಯತೀತ ನಾಯಕರು ನಮ್ಮ ಪಕ್ಷದ ಬಗ್ಗೆ ಆರೇಳು ವರ್ಷಗಳಿಂದ ಸುಳ್ಳು ಪ್ರಚಾರ ಮಾಡುತ್ತಿದ್ದು, ಅವರಿಗೆ ತಕ್ಕ ಪಾಠ ಕಲಿಸುತ್ತೇವೆ’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಎಚ್ಚರಿಕೆ ನೀಡಿದರು.

ಸುದ್ದಿಗಾರರ ಜೊತೆ ಮಂಗಳವಾರ ಮಾತನಾಡಿ, 'ಜೆಡಿಎಸ್ ಪಕ್ಷವನ್ನು ಬಿಜೆಪಿಯ 'ಬಿ' ಟೀಂ ಎಂದು ಬಿಂಬಿಸಲು ಪ್ರಯತ್ನ ಮಾಡಿದ್ದಾರೆ. ಅದನ್ನು ಇನ್ನೂ ಮುಂದುವರಿಸುತ್ತಿದ್ದಾರೆ’ ಎಂದರು.

'ಇತ್ತೀಚೆಗೆ ತುಮಕೂರಿನಲ್ಲೂ ಕಾಂಗ್ರೆಸ್ ನಾಯಕರು ನಮ್ಮ ಬಗ್ಗೆ ಲಘುವಾಗಿ ಮಾತನಾಡಿದ್ದಾರೆ. ಅವರೇ ಜಾತಿವಾರು ಸಮಾವೇಶ ಮಾಡಿಕೊಂಡು ನಾವು ಜಾತ್ಯತೀತರು ಎಂದು ಭಂಡತನ ಪ್ರದರ್ಶಿಸುತ್ತಿದ್ದಾರೆ.

ಬಿಜೆಪಿ ಜತೆ ಸೇರಿ ನಾನು ಸರ್ಕಾರ ಮಾಡಿದಾಗಲೂ ಕೋಮು ಸಂಘರ್ಷಕ್ಕೆ ಅವಕಾಶ ಕೊಡಲಿಲ್ಲ. ಆದರೆ, ಈಗ ಏನಾಗಿದೆ? ಅನೇಕ ತಿಂಗಳುಗಳಿನಿಂದ ಸಮಾಜವನ್ನು ಒಡೆಯುವ ಘಟನೆಗಳು ನಡೆಯುತ್ತಿವೆ. ಇದಕ್ಕೆ ಕಾರಣ ಯಾರು ಎನ್ನುವುದು ಜನರಿಗೆ ಗೊತ್ತಿದೆ' ಎಂದು ಕಾಂಗ್ರೆಸ್ ನಾಯಕರ ಮೇಲೆ ಟೀಕಾ ಪ್ರಹಾರ ನಡೆಸಿದರು.

‘ಪಕ್ಷ ಉಳಿಸುವುದಕ್ಕೆ ನಾನು ಬಿಜೆಪಿ ಜತೆ ಸೇರಿ ಸರ್ಕಾರ ಮಾಡಿದೆ. ಅದೇ ರೀತಿ ಕಾಂಗ್ರೆಸ್ ಜತೆಯಲ್ಲೂ ಸೇರಿ ಸರ್ಕಾರ ಮಾಡಿದೆ. ಆದರೆ, ಹಿಂದೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಬಿಜೆಪಿ ಸರ್ಕಾರದಲ್ಲಿ ಮಂತ್ರಿ ಆಗಿದ್ದರು. ಈಗ ಕಾಂಗ್ರೆಸ್ ಪಕ್ಷವೇ ಮಹಾರಾಷ್ಟ್ರದಲ್ಲಿಶಿವಸೇನಾ ಜತೆ ಸರ್ಕಾರ ಮಾಡಿದೆ. ಇದಕ್ಕೆ ಏನೆಂದು ಹೇಳಬೇಕು’ ಎಂದು ಕುಮಾರಸ್ವಾಮಿ ಕುಟುಕಿದರು.

ರಾಜ್ಯಸಭೆ ಚುನಾವಣೆಗೂ ಕಣಕ್ಕೆ: ‘ವಿಧಾನಸಭೆಯಿಂದ ರಾಜ್ಯಸಭೆಗೆ ನಾಲ್ಕನೇ ಅಭ್ಯರ್ಥಿ ಆಯ್ಕೆಗೆ ಮೂರು ಪಕ್ಷಗಳಿಗೂ ಸಂಖ್ಯಾ ಬಲ ಇಲ್ಲ. ಮೂರು ಪಕ್ಷಕ್ಕೆ ಹೋಲಿಸಿದರೆ ನಮ್ಮ ಮತಗಳು ಹೆಚ್ಚಿವೆ. ನಾವು ಅಭ್ಯರ್ಥಿಯನ್ನು ಕಣಕ್ಕೆ ಇಳಿಸುತ್ತೇವೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT