ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೆಡಿಎಸ್‌ ನಾಯಕ ಎಚ್‌.ಡಿ ಕುಮಾರಸ್ವಾಮಿಗೆ ಕೋವಿಡ್‌ ಪಾಸಿಟಿವ್‌

ಅಕ್ಷರ ಗಾತ್ರ

ಬೆಂಗಳೂರು: ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ ಕುಮಾರಸ್ವಾಮಿ ಅವರಿಗೆ ಕೊರೊನಾ ವೈರಸ್‌ ಸೋಂಕು ಇರುವುದು ಸೋಮವಾರ ದೃಢವಾಗಿದೆ.

ಈ ಕುರಿತು ಟ್ವೀಟ್‌ ಮಾಡಿ ಅವರು ಮಾಹಿತಿ ನೀಡಿದ್ದಾರೆ.

’ಸಣ್ಣ ಪ್ರಮಾಣದ ಜ್ವರ, ಮೈಕೈ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಾನು ಇಂದು ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿದ್ದು, ಫಲಿತಾಂಶ ಪಾಸಿಟಿವ್ ಎಂದು ಬಂದಿದೆ. ಕೋವಿಡ್‌ ಲಕ್ಷಣಗಳು ಕಾಣಿಸಿಕೊಂಡಿರುವ ಕಾರಣ, ವೈದ್ಯರು ಹೋಮ್ ಐಸೋಲೇಷನ್ʼನಲ್ಲಿಯೇ ಇದ್ದು ಚಿಕಿತ್ಸೆ ಪಡೆಯುವಂತೆ ಸೂಚಿಸಿದ್ದಾರೆ’ ಎಂದು ಅವರು ತಿಳಿಸಿದ್ದಾರೆ.

‘ವೈದ್ಯರ ಸೂಚನೆಯಂತೆ, ನಾನು 10 ದಿನಗಳ ಕಾಲ ಮನೆಯಲ್ಲೇ ಇದ್ದು ಚಿಕಿತ್ಸೆ ಪಡೆಯುತ್ತೇನೆ. ದಯಮಾಡಿ ಯಾರೂ ನನ್ನ ಭೇಟಿಗೆ ಬರಬಾರದೆಂದು ವಿನಂತಿಸುತ್ತೇನೆ. ಯಾರೂ ಅನ್ಯತಾ ಭಾವಿಸಬಾರದು. 3-4 ದಿನಗಳಿಂದ ನನ್ನ ಪ್ರಾಥಮಿಕ ಸಂಪರ್ಕಕ್ಕೆ ಬಂದಿದ್ದವರೆಲ್ಲರೂ ತಪ್ಪದೇ ಕೋವಿಡ್‌ ಪರೀಕ್ಷೆ ಮಾಡಿಸಿಕೊಳ್ಳಬೇಕೆಂದು ಕೋರುತ್ತೇನೆ’ ಎಂದು ಅವರು ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT