ಸೋಮವಾರ, ಜನವರಿ 25, 2021
15 °C

‘ಬೊಂಬಾಯಿ ಮಿಠಾಯಿ’: ವಿಶ್ವನಾಥ್ ವಿರುದ್ಧ ಸಾರಾ ಮಹೇಶ್ ಆಕ್ರೋಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ವಿಧಾನ ಪರಿಷತ್‌ ಸದಸ್ಯ ಎಚ್‌.ವಿಶ್ವನಾಥ್‌ ವಿರುದ್ಧ ಜೆಡಿಎಸ್‌ ನಾಯಕ ಸಾರಾ ಮಹೇಶ್ ಅವರು ಟ್ವಿಟರ್‌ನಲ್ಲಿ ಟೀಕಾಪ್ರಹಾರ ನಡೆಸಿದ್ದಾರೆ.

ಸರಣಿ ಟ್ವೀಟ್‌ ಮಾಡಿರುವ ಮಹೇಶ್‌, ‘ಬೊಂಬಾಯಿ ಮಿಠಾಯಿ ವಿಶ್ವನಾಥ್' ಅವರ ನಾಲಿಗೆಗೆ ಇನ್ನೊಬ್ಬರನ್ನು ವ್ಯಕ್ತಿಗತವಾಗಿ ಜರಿಯುವ ಹಕ್ಕಾದರೂ ಇದೆಯಾ? ಆಚಾರವಿಲ್ಲದ ನಾಲಿಗೆ ನಿನ್ನ ನೀಚ ಬುದ್ಧಿಯ ಬಿಡು ನಾಲಿಗೆ’ ಎಂದು ಕುಟುಕಿದ್ದಾರೆ.

ಮುಂದುವರಿದು, ಬೌದ್ಧಿಕ ದಿವಾಳಿತನಕ್ಕೆ ತುತ್ತಾದವರು ಮಾತ್ರ ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ವ್ಯಕ್ತಿಗತ ಲೇವಡಿಗಿಳಿಯುತ್ತಾರೆ. ಅವರು ಎಂದೋ ಬಫೂನ್‌ ಆಗಿರುವುದನ್ನು ಮರೆತಿರುತ್ತಾರೆ. ಬೊಂಬಾಯಿ ಮಿಠಾಯಿ ರುಚಿ ಸವೆದಿದ್ದು ಮಂತ್ರಿಯಾಗುವ ತಿರುಕನ ಕನಸು ಕಾಣುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ಮಾತನಾಡುವಾಗ ನಾಲಿಗೆ ಮೇಲೆ ಹಿಡಿತವಿರಲಿ. ಇಲ್ಲವಾದರೆ ತಕ್ಕ ಶಾಸ್ತಿ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು