ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಷ್ಟ್ರಪತಿ ಚುನಾವಣೆ: ಮಮತಾ ಸಭೆಯಲ್ಲಿ ಭಾಗಿಯಾಗಲಿರುವ ಕುಮಾರಸ್ವಾಮಿ, ದೇವೇಗೌಡ

Last Updated 14 ಜೂನ್ 2022, 16:24 IST
ಅಕ್ಷರ ಗಾತ್ರ

ಬೆಂಗಳೂರು: ರಾಷ್ಟ್ರಪತಿ ಚುನಾವಣೆ ಸಂಬಂಧ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕರೆದಿರುವ ಪ್ರತಿಪಕ್ಷಗಳ ಸಭೆಯಲ್ಲಿ ಪಾಲ್ಗೊಳ್ಳಲು ಜಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರು ಬುಧವಾರ ಬೆಳಗ್ಗೆ ನವದೆಹಲಿಗೆ ತೆರಳಲಿದ್ದಾರೆ.

ಈ ಬಗ್ಗೆ ಪ್ರಕಟಣೆ ಬಿಡುಗಡೆ ಮಾಡಿರುವ ಕುಮಾರಸ್ವಾಮಿ, ‘ರಾಷ್ಟ್ರಪತಿ ಚುನಾವಣೆಗೆ ಪ್ರತಿಪಕ್ಷಗಳ ಒಕ್ಕೂಟದಿಂದ ಒಮ್ಮತದ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಬಗ್ಗೆ ಚರ್ಚೆ ನಡೆಸಲು ಮಮತಾ ಬ್ಯಾನರ್ಜಿ ಅವರು ದೆಹಲಿಯಲ್ಲಿ ಸಭೆ ಕರೆದಿದ್ದಾರೆ. ಈ ಸಭೆಯಲ್ಲಿ ಪಾಲ್ಗೊಳ್ಳಬೇಕು ಎಂದು ಅವರು ಜೆಡಿಎಸ್‌ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಎಚ್.ಡಿ. ದೇವೇಗೌಡರಿಗೆ ಹಾಗೂ ನನಗೆ ವೈಯಕ್ತಿಕವಾಗಿ ಕರೆ ಮಾಡಿ ಆಹ್ವಾನಿಸಿದ್ದಾರೆ. ಹೀಗಾಗಿ ನಾವಿಬ್ಬರೂ ಸಭೆಯಲ್ಲಿ ಪಾಲ್ಗೊಳ್ಳುತ್ತಿದ್ದೇವೆ’ ಎಂದಿದ್ದಾರೆ.

ಒಮ್ಮತದ ಅಭ್ಯರ್ಥಿಯನ್ನು ಕಣಕ್ಕಿಳಿಸುವುದು ಎಲ್ಲ ಪ್ರಾದೇಶಿಕ ಪಕ್ಷಗಳ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ಮಮತಾ ಬ್ಯಾನರ್ಜಿ ಅವರು ಪ್ರಯತ್ನಗಳನ್ನು ಆರಂಭಿಸಿದ್ದು, ಸುಮಾರು ಇಪ್ಪತ್ತೆರಡಕ್ಕೂ ಹೆಚ್ಚು ಪಕ್ಷಗಳ ನಾಯಕರನ್ನು ಸಭೆಗೆ ಆಹ್ವಾನಿಸಿದ್ದಾರೆ. ಆದರೆ, ಜೆಡಿಎಸ್‌ ಪಕ್ಷದಿಂದ ಇಬ್ಬರು ನಾಯಕರನ್ನು ಅವರು ವೈಯಕ್ತಿವಾಗಿ ಆಹ್ವಾನಿಸಿದ್ದಾರೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

ನವದೆಹಲಿಯ ಕಾನ್ಸ್‌ಟಿಟ್ಯೂಷನ್ ಕ್ಲಬ್‌ನಲ್ಲಿ ಮಧ್ಯಾಹ್ನ 3 ಗಂಟೆಗೆ ಈ ಸಭೆ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT