ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿರಾ ಉಪಚುನಾವಣೆ: ಕಾರ್ಯತಂತ್ರಕ್ಕೆ ಎಚ್‌ಡಿಕೆ ಸಭೆ

Last Updated 11 ಸೆಪ್ಟೆಂಬರ್ 2020, 19:23 IST
ಅಕ್ಷರ ಗಾತ್ರ

ಬೆಂಗಳೂರು: ಶಿರಾ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಕಾರ್ಯತಂತ್ರ ಕುರಿತು ಪಕ್ಷದ ಸ್ಥಳೀಯ ಮುಖಂಡರೊಂದಿಗೆ ಶುಕ್ರವಾರ ಸಭೆ ನಡೆಸಿದ ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ, ಸೋಮವಾರದಿಂದಲೇ ಕ್ಷೇತ್ರದಲ್ಲಿ ಕಾರ್ಯಪ್ರವೃತ್ತರಾಗುವಂತೆ ಸೂಚನೆ ನೀಡಿದರು.

ಜೆಡಿಎಸ್ ಪ್ರಧಾನ ಕಚೇರಿ ಜೆ.ಪಿ. ಭವನದಲ್ಲಿ ನಡೆದ ಸಭೆಯಲ್ಲಿ ಶಿರಾ ಶಾಸಕರಾಗಿದ್ದ ಸತ್ಯನಾರಾಯಣ ಅವರ ಪತ್ನಿ ಅಮ್ಮಾಜಮ್ಮ, ಪುತ್ರ ಬಿ.ಎಸ್‌. ಸತ್ಯಪ್ರಕಾಶ್‌ ಸೇರಿದಂತೆ ಪಕ್ಷದ ಸ್ಥಳೀಯ ಮುಖಂಡರು ಪಾಲ್ಗೊಂಡಿದ್ದರು. ತುಮಕೂರು ಜಿಲ್ಲೆಯ ಹಲವು ಮುಖಂಡರೂ ಇದ್ದರು. ಅಭ್ಯರ್ಥಿಗಳ ಆಯ್ಕೆ, ಚುನಾವಣಾ ಸಿದ್ಧತೆ ಸೇರಿದಂತೆ ಹಲವು ವಿಚಾರಗಳ ಕುರಿತು ಕುಮಾರಸ್ವಾಮಿ ಚರ್ಚೆ
ನಡೆಸಿದ್ದಾರೆ.

ಸಭೆಯ ಬಳಿಕ ಪತ್ರಕರ್ತರ ಜತೆ ಮಾತನಾಡಿದ ಕುಮಾರಸ್ವಾಮಿ, ‘ಮೊದಲಿನಿಂದಲೂ ಶಿರಾ ಕ್ಷೇತ್ರ ಜೆಡಿಎಸ್‌ನ ಭದ್ರಕೋಟೆ. ಈಗ ಉಪ ಚುನಾವಣೆ ನಡೆಯುತ್ತಿದೆ. ಬಿಜೆಪಿ ಮತ್ತು ಕಾಂಗ್ರೆಸ್‌ ಆಗಲೇ ಸಿದ್ಧತೆ ನಡೆಸುತ್ತಿವೆ. ಬಿಜೆಪಿಯವರು ಅಧಿಕಾರದಲ್ಲಿದ್ದು, ಉಪ ಚುನಾವಣೆಯಲ್ಲಿ ಆಮಿಷ ಒಡ್ಡಿ, ಆಡಳಿತ ಯಂತ್ರ ದುರ್ಬಳಕೆ ಮಾಡಿಕೊಂಡು ಗೆಲುವು ಸಾಧಿಸುತ್ತಾರೆ. ಈ ಬಾರಿ ಅಂತಹ ಪ್ರಯತ್ನ ಸಫಲವಾಗದಂತೆ ತಡೆಯುವುದು ನಮ್ಮ ಗುರಿ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT