ಗುರುವಾರ , ಅಕ್ಟೋಬರ್ 1, 2020
27 °C

ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡರಿಗೆ ಕೋವಿಡ್-19 ದೃಢ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಬೆಂಗಳೂರು: ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್‌ ಶಾಸಕ ಹಾಗೂ ಮಾಜಿ ಸಚಿವ ಜಿ.ಟಿ. ದೇವೇಗೌಡ ಅವರಿಗೆ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿದೆ.

ಈ ಕುರಿತು ಸ್ವತಃ ಶಾಸಕರೇ ಟ್ವೀಟ್ ಮಾಡಿದ್ದು, ನಾನು ಕೋವಿಡ್-19ಪರೀಕ್ಷೆಗೆ ಒಳಗಾಗಿದ್ದು ಕೋವಿಡ್ ಪಾಸಿಟಿವ್ ಎಂದು ವರದಿ ಬಂದಿದೆ. ರೋಗಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯ ಮೇರೆಗೆ ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದೇನೆ. ಕಳೆದ 7 ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದಿರುವವರು ಕೋವಿಡ್ ಪರೀಕ್ಷೆಗೆ ಒಳಪಟ್ಟು, ಕೂಡಲೇ ಕ್ವಾರಂಟೈನ್‌ಗೆ ಒಳಗಾಗಿ ಮುಂಜಾಗ್ರತೆ ವಹಿಸಿ ಎಂದು ವಿನಂತಿಸುತ್ತೇನೆ ಎಂದು ಹೇಳಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೂ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಈ ಹಿನ್ನೆಲೆಯಲ್ಲಿ ಇಬ್ಬರೂ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದೀಗ ಜಿ.ಟಿ. ದೇವೇಗೌಡರಿಗೂ ಸೋಂಕು ತಗುಲಿರುವುದು ದೃಢಪಟ್ಟಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು