ಹನೂರು: ‘ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಮತ್ತೊಮ್ಮೆ ಮುಖ್ಯಮಂತ್ರಿಯಾಗಲಿ’ ಎಂದು ಹರಕೆ ಹೊತ್ತ ತುಮಕೂರು ಜಿಲ್ಲೆಯ ಮೂವರು ಅಭಿಮಾನಿಗಳು ಪಾದಯಾತ್ರೆ ಮೂಲಕ ಮಹದೇಶ್ವರ ಬೆಟ್ಟಕ್ಕೆ ತೆರಳಿದರು.
ಮಧುಗಿರಿ ತಾಲ್ಲೂಕಿನ ಶ್ರಾವಂಡನಹಳ್ಳಿಯ ಎಸ್.ಎ. ಅಶೋಕ್, ಜಗನ್ನಾಥ್, ಮೂರ್ತಿ ಎಂಬುವವರು ಯುಗಾದಿಯಂದು ಪಾದಯಾತ್ರೆ ಆರಂಭಿಸಿದ್ದು, ಗುರುವಾರ ಪಟ್ಟಣ ತಲುಪಿದರು.
‘ಎಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಬೇಕು. ಮಧುಗಿರಿ ಕ್ಷೇತ್ರದಲ್ಲಿ ವೀರಭದ್ರಯ್ಯ, ಗೌರಿಬಿದನೂರು ಕ್ಷೇತ್ರದಲ್ಲಿ ನರಸಿಂಹಮೂರ್ತಿ ಜಯಗಳಿಸಬೇಕು’ ಎಂದು ಹರಕೆ ಹೊತ್ತಿದ್ದಾರೆ.
‘ಕುಮಾರಸ್ವಾಮಿ ರೈತರ ಸಾಲ ಮನ್ನಾ ಮಾಡಿದ್ದರು. ಲಾಟರಿ, ಸಾರಾಯಿ ನಿಷೇಧಿಸಿ ರಾಜ್ಯದ ಮಹಿಳೆಯರ ಕಣ್ಣೀರೊರೆಸಿದ್ದರು. ಅವರು ಮುಖ್ಯಮಂತ್ರಿಯಾದರೆ ರಾಜ್ಯದ ಸಮಗ್ರ ಅಭಿವೃದ್ಧಿಯಾಗುತ್ತದೆ’ ಎಂದು ಅಶೋಕ ವಿಶ್ವಾಸ ವ್ಯಕ್ತಪಡಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.