ಬೆಂಗಳೂರು: ಚಿಕ್ಕನಾಯಕನಹಳ್ಳಿ ವಿಧಾನಸಭಾ ಕ್ಷೇತ್ರದಿಂದ ಭಾನುವಾರದಿಂದ (ಡಿ.11) ಮತ್ತೆ ಆರಂಭ ಆಗಬೇಕಿದ್ದ ಪಂಚರತ್ನ ರಥಯಾತ್ರೆಯನ್ನು ಮಳೆಯ ಕಾರಣ ನಾಲ್ಕು ದಿನಗಳು ಮುಂದೂಡಲಾಗಿದೆ.
ತುಮಕೂರು ಜಿಲ್ಲೆ ಸೇರಿದಂತೆ ರಾಜ್ಯದ ಒಳನಾಡಿನಲ್ಲಿ ಮಳೆ ಸುರಿಯುತ್ತಿದೆ.ಪೂರ್ವನಿಗದಿತ ವೇಳಾಪಟ್ಟಿಯಂತೆ ರಥಯಾತ್ರೆ ಚಿಕ್ಕನಾಯಕನಹಳ್ಳಿಯಿಂದ ಆರಂಭವಾಗಬೇಕಿತ್ತು. ನಂತರ ತುರುವೇಕೆರೆ, ತುಮಕೂರು ಗ್ರಾಮಾಂತರ, ಕುಣಿಗಲ್ ಕ್ಷೇತ್ರಗಳಲ್ಲಿ ಸಾಗಬೇಕಿತ್ತು.ತುಮಕೂರು ಜಿಲ್ಲೆಯಲ್ಲಿ ಯಲ್ಲೊ ಅಲರ್ಟ್ ಘೋಷಿಸಲಾಗಿದೆ. ಹೀಗಾಗಿ, ರಥಯಾತ್ರೆ ಮಾರ್ಗ, ವೇಳಾಪಟ್ಟಿಯನ್ನು ಪರಿಷ್ಕರಿಸಲಾಗಿದೆ.
ಡಿ.15ರಂದು ಮಾಗಡಿಯಲ್ಲಿ ರಥಯಾತ್ರೆ ನಡೆಯಲಿದೆ.16ರಂದು ರಾಮನಗರ, 17ರಂದು ಹಾರೋಹಳ್ಳಿ, 18ರಂದು ಕನಕಪುರ, 19ರಂದು ಚನ್ನಪಟ್ಟಣ ಕ್ಷೇತ್ರ,20ರಂದು ಮಂಡ್ಯ ಜಿಲ್ಲೆಗೆ ರಥಯಾತ್ರೆ ಪ್ರವೇಶ ಮಾಡಲಿದೆ. 20ರಂದು ಮಳವಳ್ಳಿ, 21ಕ್ಕೆ ಮದ್ದೂರು, 22ಕ್ಕೆ ಮಂಡ್ಯ, 23ಕ್ಕೆ ಶ್ರೀರಂಗಪಟ್ಟಣ, 24ಕ್ಕೆ ಪಾಂಡವಪುರ, 25ಕ್ಕೆ ಕೆ.ಆರ್.ಪೇಟೆ, 26ಕ್ಕೆ ನಾಗಮಂಗಲ ಕ್ಷೇತ್ರಗಳಲ್ಲಿ ಸಂಚರಿಸಲಿದೆ.
ಡಿ.27ರಂದು ಮತ್ತೆ ತುಮಕೂರು ಜಿಲ್ಲೆ ಪ್ರವೇಶಿಸಲಿದೆ. 27ರಂದು ತುರುವೇಕೆರೆ, 28ರಂದು ಚಿಕ್ಕನಾಯಕನಹಳ್ಳಿ, 29ರಂದು ತುಮಕೂರು ಗ್ರಾಮಾಂತರ, 30ರಂದು ಕುಣಿಗಲ್ ಕ್ಷೇತ್ರಗಳಲ್ಲಿ ಸಂಚರಿಸಲಿದೆಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಹೇಳಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.