ಮೈಸೂರು: ಸುಡುವ ಬಿಸಿಲನ್ನು ಲೆಕ್ಕಿಸದೇ ಸೇರಿದ್ದ ಲಕ್ಷಾಂತರ ಅಭಿಮಾನಿಗಳು ಹಾಗೂ ಕಾರ್ಯಕರ್ತರ ಜಯಘೋಷಗಳ ನಡುವೆ ಜೆಡಿಎಸ್‌ನ ಪಂಚರತ್ನ ರಥಯಾತ್ರೆಯ ಸಮಾರೋಪವು ಭಾನುವಾರ ಸಂಜೆ ನಗರದಲ್ಲಿ ಆರಂಭವಾಯಿತು.
ನಗರದ ಉತ್ತನಹಳ್ಳಿ ರಿಂಗ್ ರಸ್ತೆಯ ಜ್ವಾಲಾಮುಖಿ ತ್ರಿಪುರ ದೇಗುಲ ಸಮೀಪದ ಮೈದಾನದಲ್ಲಿ ಆಯೋಜಿಸಿದ್ದ ಸಮಾವೇಶದಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಪಕ್ಷದ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಪರ ಘೋಷಣೆಗಳು ಮುಗಿಲು ಮುಟ್ಟಿದವು. ಪಕ್ಷದ ಬಾವುಟಗಳು ಹಾರಾಡಿದವು.
ವೇದಿಕೆಯಲ್ಲಿ ನಿರ್ಮಾಣಗೊಂಡಿದ್ದ ರ್‍ಯಾಂಪ್ ನಲ್ಲಿ ಅನಾರೋಗ್ಯದ ಕಾರಣ ಗಾಲಿಕುರ್ಚಿಯಲ್ಲಿ ಕುಳಿತ ಎಚ್.ಡಿ.ದೇವೇಗೌಡ ಜನರತ್ತ ಕೈಬೀಸಿದರು. ಅವರೊಂದಿಗೆ ಎಚ್.ಡಿ.ಕುಮಾರಸ್ವಾಮಿ, ಪ್ರಜ್ವಲ್ ರೇವಣ್ಣ, ನಿಖಿಲ್ ಕುಮಾರಸ್ವಾಮಿ, ಸೂರಜ್ ರೇವಣ್ಣ ಹೆಜ್ಜೆ ಹಾಕಿದರು. ಜನಸ್ತೋಮ ನೋಡಿದ ದೇವೇಗೌಡ ಅವರು ಭಾವುಕರಾದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.