ಶುಕ್ರವಾರ, ಜನವರಿ 21, 2022
28 °C
ರಾಯಚೂರು: ಸಿಂಧನೂರು ಶಾಸಕ ವೆಂಕಟರಾವ್ ನಾಡಗೌಡ ಘೋಷಣೆ

ರಾಯಚೂರು–ಕೊಪ್ಪಳ ಪರಿಷತ್ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿಗೆ ಜೆಡಿಎಸ್‌ ಬೆಂಬಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಸಿಂಧನೂರು (ರಾಯಚೂರು ಜಿಲ್ಲೆ): ರಾಯಚೂರು–ಕೊಪ್ಪಳ ವಿಧಾನ ಪರಿಷತ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶರಣೇಗೌಡ ಬಯ್ಯಾಪುರ ಅವರಿಗೆ ಜೆಡಿಎಸ್‌ ಬೆಂಬಲ ಘೋಷಿಸಿದೆ.

ಸೋಮವಾರ ನಡೆದ ಜೆಡಿಎಸ್ ಬೆಂಬಲಿತ ಗ್ರಾಮ ಪಂಚಾಯಿತಿ ಮತ್ತು ನಗರಸಭೆ ಸದಸ್ಯರ ಸಭೆಯಲ್ಲಿ ಮಾತನಾಡಿದ ಜೆಡಿಎಸ್‌ ಶಾಸಕ ವೆಂಕಟರಾವ್ ನಾಡಗೌಡ ಈ ಘೋಷಣೆ ಮಾಡಿದರು.

‘ಶರಣೇಗೌಡ ಬಯ್ಯಾಪುರ ಅವರು ಅತ್ಯಂತ ಸರಳ ವ್ಯಕ್ತಿಯಾಗಿದ್ದು, ಗ್ರಾಮ ಪಂಚಾಯಿತಿ ಮತ್ತು ನಗರಸಭೆ ಸದಸ್ಯರ ಸಮಸ್ಯೆಗಳ ಅರಿವು ಇದೆ. ಅವರನ್ನು ವಿಧಾನ ಪರಿಷತ್‍ಗೆ ಆಯ್ಕೆ ಮಾಡಬೇಕು’ ಎಂದು ಕೋರಿದರು.

‘ಶರಣೇಗೌಡ ಬಯ್ಯಾಪುರ ಅವರನ್ನು ಬೆಂಬಲಿಸಲು ಎಚ್.ಡಿ.ಕುಮಾರಸ್ವಾಮಿ ಅವರು ಅನುಮತಿ ನೀಡಿದ್ದಾರೆ. ಹೀಗಾಗಿ ಇವರಿಗೆ ಬೆಂಬಲ ನೀಡಬೇಕು‘ ಎಂದರು. 

‘ಚುನಾವಣೆ ಪ್ರಕ್ರಿಯೆ ಆರಂಭಗೊಂಡು ಇಷ್ಟು ದಿನಗಳಾದರೂ ಈವರೆಗೆ ಬಿಜೆಪಿ ಅಭ್ಯರ್ಥಿ ಅಥವಾ ಆ ಪಕ್ಷದ ಮುಖಂಡರು ನಮ್ಮನ್ನು ಸಂಪರ್ಕಿಸಿಲ್ಲ. ನಮ್ಮ ಕಾರ್ಯಕರ್ತರಲ್ಲೇ ಒಡಕುಂಟು ಮಾಡಲು ಪ್ರಯತ್ನಿಸುತ್ತಿದ್ದಾರೆ. ಇದನ್ನು ಖಂಡಿಸಿ ಸ್ಥಳೀಯ ಜನಪ್ರತಿನಿಧಿಗಳು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಬೆಂಬಲಿಸಬೇಕು’ ಎಂದು ಹೇಳಿದರು.

ಸಭೆಯಲ್ಲಿ ಪಾಲ್ಗೊಂಡಿದ್ದ ಕಾಂಗ್ರೆಸ್‌ ಅಭ್ಯರ್ಥಿ ಶರಣೇಗೌಡ ಬಯ್ಯಾಪುರ, ಶಾಸಕ ವೆಂಕಟರಾವ್ ನಾಡಗೌಡರ ಕಾಲಿಗೆ ಬಿದ್ದು ಆಶೀರ್ವಾದ ಕೇಳಿದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು