3ರಂದು ಹಾಸನ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಅಂತಿಮ: ಎಚ್‌ಡಿಕೆ

ಬಳ್ಳಾರಿ: ‘ಹಾಸನದ ಏಳು ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಫೆ.3ರಂದು ಸಮಸ್ಯೆಗಳಿಲ್ಲದೆ ಅಂತಿಮಗೊಳಿಸಲಾಗುವುದು, ತಮ್ಮ ಪಕ್ಷದ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಫೆ. 10 ರಂದು ಬಿಡುಗಡೆ ಮಾಡಲಾಗುವುದು’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಹೇಳಿದರು.
‘ನಮ್ಮ ಕುಟುಂಬದಲ್ಲಿ ಕೋಲ್ಡ್ ವಾರೂ ಇಲ್ಲ; ಹಾಟ್ ವಾರೂ ಇಲ್ಲ. ಹಾಸನದ 7 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಗೆ ಸುಗಮವಾಗಿ ಒಪ್ಪಿಗೆ ದೊರೆಯಲಿದೆ’ ಎಂದು ಸಂಡೂರು ತಾಲ್ಲೂಕಿನ ಕುರೇಕುಪ್ಪದಲ್ಲಿ ಮಂಗಳವಾರ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
‘ಪ್ರತಿ ಪಕ್ಷದಲ್ಲೂ ಆಯಾ ಪಕ್ಷದ ಬೆಳವಣಿಗೆಗಿಂತ ಹೆಚ್ಚಾಗಿ ಅವರವರ ಕುಟುಂಬದ, ಮಕ್ಕಳ ಬೆಳವಣಿಗೆ ಕುರಿತು ಚಿಂತನೆ ನಡೆಯುತ್ತಿದೆ. ನಮ್ಮ ಕುಟುಂಬವನ್ನು 30 ವರ್ಷಗಳಿಂದ ಟಾರ್ಗೆಟ್ ಮಾಡಲಾಗುತ್ತಿದೆ. ಜೆಡಿಎಸ್‌ಗೆ ಕುಟುಂಬ ರಾಜಕಾರಣದ ಲೇಬಲ್ ಹಚ್ಚಲಾಗಿದೆ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.