ಬುಧವಾರ, ಆಗಸ್ಟ್ 4, 2021
22 °C

ರಾಕ್ ಲೈನ್ ವೆಂಕಟೇಶ್ ಮನೆಗೆ ಜೆಡಿಎಸ್ ಕಾರ್ಯಕರ್ತರಿಂದ ಮುತ್ತಿಗೆ ಯತ್ನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಟೀಕಿಸಿದ್ದ ಚಿತ್ರ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಅವರ ಮನೆಗೆ ಜೆಡಿಎಸ್ ಕಾರ್ಯಕರ್ತರು ಶನಿವಾರ ಬೆಳಿಗ್ಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.

ಮಂಡ್ಯದ ಕೆ ಆರ್ ಎಸ್ ಅಣೆಕಟ್ಟೆ ಸಮೀಪದ‌ ಬೇಬಿ ಬೆಟ್ಟದಲ್ಲಿ ನಡೆಯುತ್ತಿರುವ ಕಲ್ಲು ಗಣಿಗಾರಿಕೆಗೆ ಸಂಬಂಧಿಸಿದಂತೆ ಕುಮಾರಸ್ವಾಮಿ ಮತ್ತು ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ನಡುವೆ ಹಲವು ದಿನಗಳಿಂದ ವಾಕ್ಸಮರ ನಡೆಯುತ್ತಿದೆ. ಸುಮಲತಾ ಜತೆ ಗುರುತಿಸಿಕೊಂಡಿರುವ ರಾಕ್ ಲೈನ್ ವೆಂಕಟೇಶ್, ಶುಕ್ರವಾರ ಕುಮಾರಸ್ವಾಮಿ ಅವರನ್ನು ಕಟುವಾಗಿ ಟೀಕಿಸಿ ಹೇಳಿಕೆ ನೀಡಿದ್ದರು.

ತಮ್ಮ ನಾಯಕನನ್ನು ಟೀಕಿಸಿರುವುದಕ್ಕೆ ಸಿಟ್ಟಾಗಿರುವ ಜೆಡಿಎಸ್ ಕಾರ್ಯಕರ್ತರು, ಮಹಾಲಕ್ಷ್ಮಿ ಬಡಾವಣೆಯಲ್ಲಿರುವ ರಾಕ್ ಲೈನ್ ವೆಂಕಟೇಶ್ ಅವರ ಮನೆಗೆ ಮುತ್ತಿಗೆ ಹಾಕಲು ಶನಿವಾರ ಬೆಳಿಗ್ಗೆ ಯತ್ನಿಸಿದರು. ವೆಂಕಟೇಶ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯ ಸುಳಿವು ಪಡೆದ ಪೊಲೀಸರು, ವೆಂಕಟೇಶ್ ನಿವಾಸದ ಬಳಿ ಬ್ಯಾರಿಕೇಡ್ ಅಳವಡಿಸಿದ್ದರು. ಸ್ಥಳದಲ್ಲಿ ಜಮಾಯಿಸಿದ ಜೆಡಿಎಸ್ ಕಾರ್ಯಕರ್ತರು, ಬ್ಯಾರಿಕೇಡ್ ಗಳನ್ನು ತಳ್ಳಿಕೊಂಡು ಮನೆಯ ಒಳಕ್ಕೆ ನುಗ್ಗಲು ಯತ್ನಿಸಿದರು.‌ ಹಲವು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: ಪಾಂಡವಪುರದ ಬೇಬಿಬೆಟ್ಟವೊಂದರಲ್ಲೇ 500 ಅಕ್ರಮ ಕ್ರಷರ್ 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು