ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೆಡಿಎಸ್ ಯುವ ಘಟಕದ ರಾಜ್ಯ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿಗೆ ಕೋವಿಡ್‌ ಪಾಸಿಟಿವ್‌

Last Updated 17 ಏಪ್ರಿಲ್ 2021, 10:33 IST
ಅಕ್ಷರ ಗಾತ್ರ

ಬೆಂಗಳೂರು: ಜೆಡಿಎಸ್ ಯುವ ಘಟಕದ ರಾಜ್ಯ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರಿಗೆ ಕೋವಿಡ್‌ ಸೋಂಕು ತಗುಲಿರುವುದು ದೃಢಪಟ್ಟಿದೆ.

ಈ ಕುರಿತು ಫೇಸ್‌ಬುಕ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ನಿಖಿಲ್‌, ‘ನಾನು ಇಂದು ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದು ಪ್ರಾಥಮಿಕ ವರದಿ ಪಾಸಿಟಿವ್ ಬಂದಿದೆ. ಯಾರೂ ಆತಂಕ ಪಡುವ ಅವಶ್ಯಕತೆ ಇಲ್ಲ, ವೈದ್ಯರ ಸಲಹೆಯ ಮೇರೆಗೆ ಚಿಕಿತ್ಸೆ ಪಡೆಯುತ್ತಿದ್ದೇನೆ. ಕಳೆದ ಕೆಲ ದಿನಗಳಲ್ಲಿ ನನ್ನ ಸಂಪರ್ಕದಲ್ಲಿದ್ದವರು ಕೋವಿಡ್ ಪರೀಕ್ಷೆಗೆ ಒಳಗಾಗಿ’ ಎಂದು ಬರೆದುಕೊಂಡಿದ್ದಾರೆ.

ಇಂದು ಬೆಳಿಗ್ಗೆ ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಕೋವಿಡ್ ದೃಢಪಟ್ಟಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಏಪ್ರಿಲ್‌ 1ರಂದು ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಮತ್ತು ಅವರ ಪತ್ನಿ ಚೆನ್ನಮ್ಮ ಅವರಿಗೆ ಕೋವಿಡ್‌ ತಗುಲಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಅವರು ಗುಣಮುಖರಾಗಿದ್ದಾರೆ.

ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT