ಮೈಸೂರು: ‘ಕಾಂಗ್ರೆಸ್ ಜೊತೆ ಕೈ ಜೋಡಿಸಿ, ಎಚ್.ಡಿ.ಕುಮಾರಸ್ವಾಮಿ ಅವರ ಹೆಸರು ಕೆಟ್ಟಿತೆಂದು ನನಗೆ ಅನ್ನಿಸುವುದಿಲ್ಲ. ಎಚ್ಡಿಕೆ ಯಾವ ಅರ್ಥದಲ್ಲಿ ಈ ಮಾತು ಹೇಳಿದ್ದಾರೋ ಗೊತ್ತಿಲ್ಲ’ ಎಂದು ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಶುಕ್ರವಾರ ಇಲ್ಲಿ ಪ್ರತಿಕ್ರಿಯಿಸಿದರು.

‘ಈ ಹಿಂದೆ ಧರ್ಮಸಿಂಗ್ ಜೊತೆ ಸೇರಿ ಸಮ್ಮಿಶ್ರ ಸರ್ಕಾರ ಮಾಡುವಾಗ, ನಮ್ಮ ಅಭಿಪ್ರಾಯ ಕೇಳಿ
ದ್ದರು. ಈ ಬಾರಿ ಯಾವ ಶಾಸಕರ ಅಭಿಪ್ರಾಯವನ್ನೂ ಕೇಳಲಿಲ್ಲ.ಎಚ್.ಡಿ.ದೇವೇಗೌಡರು, ಕುಮಾರ
ಸ್ವಾಮಿ ಅವರೇ ತೀರ್ಮಾನ ಮಾಡಿದ್ದರು’ ಎಂದು ಪಕ್ಷದ ನಾಯಕತ್ವದ ವಿರುದ್ಧ ಪರೋಕ್ಷವಾಗಿ ಅಸಮಾಧಾನ ಹೊರಹಾಕಿದರು.

‘ಅಧಿಕಾರದಲ್ಲಿದ್ದಾಗ ಒಳ್ಳೆಯ ಕೆಲಸವನ್ನೇ ಮಾಡಿರುವಾಗ, ಕೆಟ್ಟ ಹೆಸರು ಎಲ್ಲಿಂದ ಬರಲಿದೆ? ಈ ಬಾರಿ ಸಮ್ಮಿಶ್ರ ಸರ್ಕಾರದಲ್ಲಿ ಜೆಡಿಎಸ್-ಕಾಂಗ್ರೆಸ್ಸಚಿವರ ಮಧ್ಯೆ ಹೊಂದಾಣಿಕೆ ಇತ್ತು. ಆದರೆ, ಕುಮಾರಸ್ವಾಮಿ ಅವರಿಗೆ ಆಗಿರೋ ಕಹಿ ಅನುಭವ ನನಗೆ ಗೊತ್ತಿಲ್ಲ’ ಎಂದರು.

‘ಕೇಂದ್ರ–ರಾಜ್ಯದಲ್ಲಿ ಬಿಜೆಪಿ ಸರ್ಕಾರ ಸುಭದ್ರವಾಗಿದೆ. ನಾಯಕತ್ವ ಬದಲಾವಣೆ ಆ ಪಕ್ಷದ ಹೈಕಮಾಂಡ್ಗೆ ಬಿಟ್ಟ ವಿಚಾರ’ ಎನ್ನುವ ಮೂಲಕ, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ‘ಮುಖ್ಯಮಂತ್ರಿ ಬದಲಾವಣೆ’ ಹೇಳಿಕೆಗೆ ಪರೋಕ್ಷವಾಗಿ ಟಾಂಗ್ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.