ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿಂದಾಲ್‌ಗೆ ಜಮೀನು: ಆಕ್ಷೇಪಣೆ ಸಲ್ಲಿಸದ ಸರ್ಕಾರಕ್ಕೆ ತರಾಟೆ

Last Updated 16 ಜುಲೈ 2021, 17:20 IST
ಅಕ್ಷರ ಗಾತ್ರ

ಬೆಂಗಳೂರು: ಜೆಎಸ್‌ಡಬ್ಲ್ಯು ಕಂಪನಿಗೆ ಬಳ್ಳಾರಿ ಜಿಲ್ಲೆಯಲ್ಲಿ 3,667 ಎಕರೆ ಭೂಮಿ ಮಾರಾಟ ಮಾಡುವ ಪ್ರಸ್ತಾಪ ಪ್ರಶ್ನಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಆಕ್ಷೇಪಣಾ ಹೇಳಿಕೆ ಸಲ್ಲಿಸದ ರಾಜ್ಯ ಸರ್ಕಾರವನ್ನು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.

‘ಮುಂದಿನ ದಿನಾಂಕದ ತನಕ ಕ್ರಯ ಪತ್ರ ಕಾರ್ಯಗತಗೊಳಿಸುವುದಿಲ್ಲ ಎಂಬ ಹೇಳಿಕೆ ಸಲ್ಲಿಸಲು ಸರ್ಕಾರ ಸಿದ್ಧವಿಲ್ಲ’ ಎಂದು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ಅಸಮಾಧಾನ ವ್ಯಕ್ತಪಡಿಸಿತು. ಹೇಳಿಕೆ ಸಲ್ಲಿಸಲು ಸಮಯ ಕೇಳಿ ಅಡ್ವೋಕೇಟ್ ಜನರಲ್ ಮಾಡಿದ ಮನವಿ ಮೇರೆಗೆ ವಿಚಾರಣೆಯನ್ನು ಪೀಠ ಸೋಮವಾರಕ್ಕೆ ಮುಂದೂಡಿತು.

ಸಂಪುಟದ ಹಲವು ಸಚಿವರ ವಿರೋಧ ಇದ್ದರೂ ಕಡಿಮೆ ದರದಲ್ಲಿ ಸರ್ಕಾರದ ಜಾಗವನ್ನು ಜೆಎಸ್‌ಡಬ್ಲ್ಯು ಕಂಪನಿಗೆ ಮಾರಾಟ ಮಾಡಲು ಸರ್ಕಾರ ಹೊರಟಿದೆ ಎಂದು ಕೆ.ಎ. ಪಾಲ್ ಎಂಬುವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT