ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿಂದಾಲ್‌ಗೆ ಜಮೀನು: ದಾಖಲೆ ಮಂಡಿಸಲು ಸೂಚನೆ

Last Updated 7 ಜೂನ್ 2021, 18:32 IST
ಅಕ್ಷರ ಗಾತ್ರ

ಬೆಂಗಳೂರು: ಜೆಎಸ್‌ಡಬ್ಲ್ಯು ಸ್ಟೀಲ್ಸ್‌ ಕಂಪನಿಗೆ ಬಳ್ಳಾರಿ ಜಿಲ್ಲೆಯಲ್ಲಿ 3,667 ಎಕರೆ ಜಮೀನನ್ನು ಕ್ರಯಪತ್ರದ ಮೂಲಕ ಹಸ್ತಾಂತರಿಸುವ ನಿರ್ಧಾರಕ್ಕೆ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.

ಈ ಸಂಬಂಧ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ಸರ್ಕಾರಕ್ಕೆ ನೋಟಿಸ್‌ ನೀಡಲು ಆದೇಶಿಸಿತು.

‘ಸರ್ಕಾರಿ ಭೂಮಿಯನ್ನು ಅತ್ಯಂತ ಕಡಿಮೆ ಬೆಲೆಗೆ ಜೆಎಸ್‌ಡಬ್ಲ್ಯು ಕಂಪನಿಗೆ ಮಾರಾಟ ಮಾಡಲಾಗಿದೆ. ಇದಕ್ಕೆ ಕೆಲ ಸಚಿವರು ವಿರೋಧ ವ್ಯಕ್ತಪಡಿಸಿದರೂ ಸಂಪುಟ ಸಭೆಯಲ್ಲಿ ಪರಿಗಣಿಸಿರಲಿಲ್ಲ’ ಎಂದು ಅರ್ಜಿದಾರರ ಪರ ವಕೀಲ ಎಸ್. ದೊರೈರಾಜು ವಾದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT