ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು ಗಲಭೆ ಪ್ರಕರಣ: ನ್ಯಾಯಾಂಗ ತನಿಖೆಗೆ ಒತ್ತಾಯ

Last Updated 13 ಆಗಸ್ಟ್ 2020, 20:12 IST
ಅಕ್ಷರ ಗಾತ್ರ

ಬೆಂಗಳೂರು: ಗಲಭೆಯ ಸತ್ಯಾಂಶ ಹೊರಬರಬೇಕೆಂದರೆ ಹೈಕೋರ್ಟ್ ಹಾಲಿ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ನ್ಯಾಯಾಂಗತನಿಖೆ ನಡೆಸಬೇಕು ಎಂದು ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಒತ್ತಾಯಿಸಿದೆ.

‘ಮ್ಯಾಜಿಸ್ಟೀರಿಯಲ್ ತನಿಖೆಯಿಂದ ಏಕಪಕ್ಷೀಯ ವರದಿ ಬರುವ ಸಾಧ್ಯತೆ ಇದೆ. ಹಿಂಸಾಚಾರದಲ್ಲಿ ಗುಂಡು ಹಾರಿಸುವ ಬದಲಿಗೆ ಗುಂಪು ಚದುರಿಸಲು ಪೊಲೀಸರು ಲಾಠಿ ಪ್ರಹಾರ, ಜಲಪಿರಂಗಿ, ರಬ್ಬರ್ ಬುಲೆಟ್, ಅಶ್ರುವಾಯು ಬಳಸಬಹುದಿತ್ತು. ಗುಂಡು ಹಾರಿಸಿದ್ದರಿಂದ ಮೂವರು ಮೃತಪಟ್ಟಿದ್ದು, ಅವರ ಕುಟುಂಬಕ್ಕೆ ₹50 ಲಕ್ಷ ಪರಿಹಾರ ನೀಡಬೇಕು’ ಎಂದು ಆಗ್ರಹಿಸಿ ಮುಖ್ಯಮಂತ್ರಿ ಅವರಿಗೆ ಬಿಎಸ್‌ಪಿ ರಾಜ್ಯ ಸಂಯೋಜಕ ಮಾರಸಂದ್ರ ಮುನಿಯಪ್ಪ ಪತ್ರ ಬರೆದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT