ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿಯದ್ದು ಮಲತಾಯಿ ಧೋರಣೆ: ಮುನಿಯಪ್ಪ

ರೈಲ್ವೆ ಖಾತೆ ಮಾಜಿ ಸಚಿವ ಕೆ.ಎಚ್‌.ಮುನಿಯಪ್ಪ ಆರೋಪ
Last Updated 3 ಜನವರಿ 2021, 21:24 IST
ಅಕ್ಷರ ಗಾತ್ರ

ಚಿತ್ರದುರ್ಗ: ರಾಜ್ಯದ ರೈಲ್ವೆ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ರೈಲ್ವೆ ಖಾತೆ ಮಾಜಿ ಸಚಿವ ಕೆ.ಎಚ್‌.ಮುನಿಯಪ್ಪ ಆರೋಪಿಸಿದರು.

ಮಾದಾರ ಚನ್ನಯ್ಯ ಗುರುಪೀಠಕ್ಕೆ ಭಾನುವಾರ ಭೇಟಿ ನೀಡಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಕೇಂದ್ರ ಸರ್ಕಾರದೊಂದಿಗೆ ಮಾಡಿ ಕೊಂಡ ಒಪ್ಪಂದದ ಪ್ರಕಾರ ರೈಲ್ವೆ ಯೋಜನೆಗಳು ಸಾಕಾರಗೊಳ್ಳಬೇಕು ಎಂದು ಒತ್ತಾಯಿಸಿದರು.

‘ಯುಪಿಎ ಸರ್ಕಾರದ ಅವಧಿಯಲ್ಲಿ ಶಿವಮೊಗ್ಗ-ಹರಿಹರ, ದಾವಣಗೆರೆ- ಚಿತ್ರದುರ್ಗ–ತುಮಕೂರು, ಚಿಂತಾ ಮಣಿ–ಮದನಪಲ್ಲಿ, ತುಮಕೂರು- ರಾಯದುರ್ಗ ರೈಲ್ವೆ ಸಂಪರ್ಕ ಯೋಜನೆಗಳಿಗೆ ಒತ್ತುಕೊಡಲಾಗಿತ್ತು. ಆಗ ಮುಖ್ಯಮಂತ್ರಿಯಾಗಿದ್ದ ಬಿ.ಎಸ್.ಯಡಿಯೂರಪ್ಪ ಅವರು ಭೂಮಿ ಹಾಗೂ ಅರ್ಧ ವೆಚ್ಚ ಭರಿಸುವುದಾಗಿ ಆಶ್ವಾ ಸನೆ ನೀಡಿದ್ದರು. ಆದರೆ, ಯೋಜನೆ
ಅನುಷ್ಠಾನಗೊಳಿಸದೇ ಮಾತಿಗೆ ತಪ್ಪಿದ್ದಾರೆ’ ಎಂದು ಮುನಿಯಪ್ಪ ಅವರು ದೂರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT