ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

27ಕ್ಕೆ ಕೆ–ಸೆಟ್: 1.07 ಲಕ್ಷ ನೋಂದಣಿ

Last Updated 23 ಸೆಪ್ಟೆಂಬರ್ 2020, 22:38 IST
ಅಕ್ಷರ ಗಾತ್ರ

ಬೆಂಗಳೂರು:ಮೈಸೂರು ವಿಶ್ವವಿದ್ಯಾಲಯವು ಇದೇ 27ರಂದು ನಡೆಸಲಿರುವ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ (ಕೆ–ಸೆಟ್) 1.07 ಲಕ್ಷ ಅಭ್ಯರ್ಥಿಗಳು ನೋಂದಣಿ ಮಾಡಿಸಿದ್ದಾರೆ.

ರಾಜ್ಯದ 11 ಜಿಲ್ಲಾ ಕೇಂದ್ರಗಳಲ್ಲಿ ಒಟ್ಟು 41 ವಿಷಯಗಳಿಗೆ ಪರೀಕ್ಷೆ ನಡೆಯಲಿದೆ.‌ಎರಡು ವರ್ಷಗಳ ನಂತರ ನಡೆಯುತ್ತಿರುವ ಈ ಪರೀಕ್ಷೆಗೆ ಅರ್ಜಿ ಸಲ್ಲಿಸುವ ದಿನಾಂಕವನ್ನು ಕೋವಿಡ್‌ ಕಾರಣದಿಂದ ಮೂರು ಬಾರಿ ಮುಂದೂಡಲಾಗಿತ್ತು.

ಭರ್ತಿ ಮಾಡಿದ ಪೂರ್ಣ ಪ್ರಮಾಣದ ಅರ್ಜಿ ಹಾಗೂ ಪ್ರವೇಶ ಪತ್ರಗಳನ್ನು ಡೌನ್‌ಲೋಡ್ ಮಾಡಿಕೊಳ್ಳಲು 15 ದಿನಗಳ ಕಾಲ ಅವಕಾಶ ನೀಡಲಾಗಿತ್ತು. ಆದರೆ, ಪರೀಕ್ಷೆಯ ಮಾಹಿತಿಯನ್ನು ವೆಬ್‌ಸೈಟ್‌ನಲ್ಲಿ ಮಾತ್ರ ನೀಡಿದ್ದರಿಂದ, ಇದನ್ನು ಗಮನಿಸದ ಎರಡು ಸಾವಿರಕ್ಕೂ ಹೆಚ್ಚು ಅಭ್ಯರ್ಥಿಗಳು ಪ್ರವೇಶಪತ್ರಗಳನ್ನು ಡೌನ್‌ಲೋಡ್‌ ಮಾಡಿಕೊಂಡಿರಲಿಲ್ಲ. ಇವರ ಅನುಕೂಲಕ್ಕಾಗಿ ಪ್ರವೇಶಪತ್ರಗಳನ್ನು ಸೆ.23ರ ರಾತ್ರಿ 12ರವರೆಗೆ ಡೌನ್‌ಲೋಡ್‌ ಮಾಡಿಕೊಳ್ಳಲು ವಿಶ್ವವಿದ್ಯಾಲಯ ಅವಕಾಶ ನೀಡಿತ್ತು.

ಪರೀಕ್ಷೆಗೆ ನೋಂದಾಯಿಸಿರುವ ಅಭ್ಯರ್ಥಿಗಳು ಈ ಕುರಿತು ಆಗಿಂದಾಗ್ಗೆ ಹೊರಡಿಸುವ ಸೂಚನೆಗಳಿಗಾಗಿ http://kset.uni-mysore.ac.in ವೆಬ್‌ಸೈಟ್‌ ವೀಕ್ಷಿಸುತ್ತಿರಬೇಕು ಎಂದು ವಿಶ್ವವಿದ್ಯಾಲಯ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT