ಮಂಗಳವಾರ, ಏಪ್ರಿಲ್ 20, 2021
31 °C

ಬಸಂತಕುಮಾರ್ ಪಾಟೀಲ, ನರಸಿಂಹಯ್ಯಗೆ ಕಸಾಪ ದತ್ತಿ ಪ್ರಶಸ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) ನೀಡುವ ‘ಡಾ. ರಾಜ್‌ಕುಮಾರ್ ದತ್ತಿ ಪ್ರಶಸ್ತಿ’ಗೆ ಚಲನಚಿತ್ರ ನಟ, ನಿರ್ಮಾಪಕ ಬಸಂತಕುಮಾರ್ ಪಾಟೀಲ್ ಹಾಗೂ ರಂಗ ಕಲಾವಿದ ಕೆ. ನರಸಿಂಹಯ್ಯ ಆಯ್ಕೆಯಾಗಿದ್ದಾರೆ. 

ಪರಿಷತ್ತಿನ ಅಧ್ಯಕ್ಷ ಮನು ಬಳಿಗಾರ್ ನೇತೃತ್ವದ ಸಮಿತಿಯು ಬುಧವಾರ ಈ ಆಯ್ಕೆ ನಡೆಸಿದೆ. ಪ್ರಶಸ್ತಿಯು ತಲಾ ₹ 30 ಸಾವಿರ  ಹಾಗೂ ಫಲಕವನ್ನು ಒಳಗೊಂಡಿದೆ. ನಟ ಡಾ. ರಾಜ್‌ಕುಮಾರ್ ಅವರ ಕುಟುಂಬ ಪರಿಷತ್ತಿನಲ್ಲಿ ₹ 5 ಲಕ್ಷ ದತ್ತಿಯನ್ನು ಇರಿಸಿದ್ದು, ಅದರಲ್ಲಿ ಬರುವ ಬಡ್ಡಿಯಲ್ಲಿ ಈ ಪುರಸ್ಕಾರವನ್ನು ರಂಗಭೂಮಿ ಮತ್ತು ಚಿತ್ರರಂಗಕ್ಕೆ ಸಂಬಂಧಿಸಿದಂತೆ ನೀಡಲಾಗುತ್ತಿದೆ ಎಂದು ಕಸಾಪ ಗೌರವ ಕಾರ್ಯದರ್ಶಿ ಕೆ. ರಾಜಕುಮಾರ್ ತಿಳಿಸಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು