ಸೋಮವಾರ, ಮೇ 23, 2022
26 °C

ಕನ್ನಡ ಸಾಹಿತ್ಯ ಪರಿಷತ್‌ ಚುನಾವಣೆ: ಇಂದು ಮತದಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ (ಕಸಾಪ) ರಾಜ್ಯ ಘಟಕದ ಅಧ್ಯಕ್ಷ, ಜಿಲ್ಲಾ ಘಟಕಗಳ ಅಧ್ಯಕ್ಷ ಹಾಗೂ ಗಡಿನಾಡು ಘಟಕಗಳ ಅಧ್ಯಕ್ಷ ಸ್ಥಾನಕ್ಕೆ ಭಾನುವಾರ ಬೆಳಿಗ್ಗೆ 8ರಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದೆ. 

ರಾಜ್ಯ ಘಟಕದ ಅಧ್ಯಕ್ಷ ಸ್ಥಾನಕ್ಕೆ 21 ಅಭ್ಯರ್ಥಿಗಳು ಸ್ಪರ್ಧೆಯಲ್ಲಿ ಇದ್ದಾರೆ. 3.10 ಲಕ್ಷ ಮಂದಿ ಮತ ಚಲಾ‌ಯಿಸಲು ಅರ್ಹರಾಗಿದ್ದು, 420 ಮತಗಟ್ಟೆಗಳನ್ನು ಗುರುತಿಸಲಾಗಿದೆ. ತಾಲ್ಲೂಕುಗಳು, ಕೆಲವು ಹೋಬಳಿಗಳು ಹಾಗೂ ಬೆಂಗಳೂರು ನಗರ ಜಿಲ್ಲೆಯ 28 ವಿಧಾನಸಭೆ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಜಿಲ್ಲಾ ಘಟಕದ ಅಧ್ಯಕ್ಷರ ಚುನಾವಣೆ ಫಲಿತಾಂಶ ಮತದಾನದ ದಿನವೇ ಘೋಷಣೆಯಾಗಲಿದೆ. ಇದೇ 24 ರಂದು ಗಡಿನಾಡ ಘಟಕಗಳ ಅಧ್ಯಕ್ಷರ ಚುನಾವಣೆಗೆ ಸಂಬಂಧಪಟ್ಟ ಅಂಚೆ ಮತಪತ್ರಗಳನ್ನು ಎಣಿಕೆ ಮಾಡಿ, ಫಲಿತಾಂಶ ಘೋಷಿಸಲಾಗುತ್ತದೆ. ಅದೇ ದಿನ ಜಿಲ್ಲೆಗಳಿಂದ ಬಂದ ಮತಗಳು ಹಾಗೂ ಅಂಚೆಗಳಿಂದ ಬಂದ ಮತಗಳನ್ನು ಕ್ರೋಢೀಕರಿಸಿ ರಾಜ್ಯಾಧ್ಯಕ್ಷ ಸ್ಥಾನದ ಫಲಿತಾಂಶ ಪ್ರಕಟಿಸಲಾಗುತ್ತದೆ.

ರಾಜ್ಯಾಧ್ಯಕ್ಷ ಸ್ಥಾನದ ಸ್ಪರ್ಧಿಗಳು: ಮ.ಚಿ. ಕೃಷ್ಣ, ವ.ಚ. ಚನ್ನೇಗೌಡ, ಮಹೇಶ್ ಜೋಶಿ, ಸಂಗಮೇಶ ಬಾದವಾಡಗಿ, ಸಿ.ಕೆ. ರಾಮೇಗೌಡ, ರಾಜಶೇಖರ ಮುಲಾಲಿ, ಬಸವರಾಜ ಶಿ. ಹಳ್ಳೂರ, ಬಾಡದ ಭದ್ರಿನಾಥ್, ಶಿವರಾಜ ಪಾಟೀಲ, ಸರಸ್ವತಿ ಶಿವಪ್ಪ ಚಿಮ್ಮಲಗಿ, ವೈ. ರೇಣುಕ, ಶೇಖರಗೌಡ ಮಾಲಿಪಾಟೀಲ, ಕೆ. ರತ್ನಾಕರ ಶೆಟ್ಟಿ, ವಾಲ್ಮೀಕಪ್ಪ ಹ. ಯಕ್ಕರನಾಳ, ಮಾಯಣ್ಣ, ಪ್ರಮೋದ್ ಹಳಕಟ್ಟಿ, ಶಿವಪ್ಪ ಮಲ್ಲಪ್ಪ ಬಾಗಲ, ಕೆ. ರವಿ ಅಂಬೇಕರ, ಸುಧೀಂದ್ರರಾವ್, ಶರಣಬಸಪ್ಪ ಕಲ್ಲಪ್ಪ ದಾನಕೈ ಹಾಗೂ ಶಿವರುದ್ರಸ್ವಾಮಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದಾರೆ. 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು