ಬೆಂಗಳೂರೂ: ಕನ್ನಡ ಸಾಹಿತ್ಯ ಪರಿಷತ್ತಿನ (ಕಸಾಪ) ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಗುರುವಾರ ಐದು ಮಂದಿ ನಾಮಪತ್ರ ಸಲ್ಲಿಸಿದ್ದಾರೆ.

ಪರಿಷತ್ತಿನ ರಾಜ್ಯಾಧ್ಯಕ್ಷ, ಜಿಲ್ಲಾ ಘಟಕಗಳ ಅಧ್ಯಕ್ಷ ಹಾಗೂ ಗಡಿನಾಡು ಘಟಕಗಳ ಅಧ್ಯಕ್ಷರ ಸ್ಥಾನಕ್ಕೆ ಮೇ 9ರಂದು ಚುನಾವಣೆ ನಡೆಯಲಿದೆ. ಏ.7ರವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶ ಇದೆ.

ಸಿ.ಕೆ. ರಾಮೇಗೌಡ, ರಾಜಶೇಖರ ಮುಲಾಲಿ, ಬಸವರಾಜ ಸಿ. ಹಳ್ಳೂರ, ಬಾಡದ ಬದ್ರಿನಾಥ್ ಹಾಗೂ ಶಿವರಾಜ ಪಾಟೀಲ ಅವರು ತಮ್ಮ ಬೆಂಬಲಿಗರೊಂದಿಗೆ ಪರಿಷತ್ತಿನ ಕೇಂದ್ರ ಕಚೇರಿಗೆ ಗುರುವಾರ ತೆರಳಿ, ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಿದರು.

ವ.ಚ. ಚನ್ನೇಗೌಡ, ಮಹೇಶ್ ಜೋಶಿ ಹಾಗೂ ಸಂಗಮೇಶ ಬಾದವಾಡಗಿ ಈಗಾಗಲೇ ನಾಮಪತ್ರ ಸಲ್ಲಿಸಿ, ಪ್ರಚಾರ ಕಾರ್ಯದಲ್ಲಿ ನಿರತರಾಗಿದ್ದಾರೆ. ಈವರೆಗೆ ನಾಮಪತ್ರ ಸಲ್ಲಿಸಿದವರ ಸಂಖ್ಯೆ 8ಕ್ಕೆ ತಲುಪಿದೆ. ಕೇರಳ ಗಡಿನಾಡ ಘಟಕಕ್ಕೆ ಸುಬ್ರಮಣ್ಯ ವಿ. ಭಟ್, ಆಂಧ್ರ ಪ್ರದೇಶ ಗಡಿನಾಡ ಘಟಕಕ್ಕೆ ಕುಣೆ ಬಾಲರಾಜ್ ಹಾಗೂ ಮಹಾರಾಷ್ಟ್ರ ಗಡಿನಾಡ ಘಟಕಕ್ಕೆ ಎಸ್.ಎಸ್. ಸಾಲೀಮಠ ಅವರು ನಾಮಪತ್ರ ಸಲ್ಲಿಸಿದ್ದಾರೆ.

ಏ.8ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಏ.12ರಂದು ಅಂತಿಮವಾಗಿ ಸ್ಪರ್ಧೆಯಲ್ಲಿ ಉಳಿದಿರುವ ಅಭ್ಯರ್ಥಿಗಳ ಪಟ್ಟಿಯನ್ನು ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಪ್ರಕಟಿಸಲಾಗುತ್ತದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.