ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) ನಡೆಸಿದ 2022–23ನೇ ಸಾಲಿನ ಕನ್ನಡ ಪ್ರವೇಶ, ಕಾವ, ಜಾಣ ಮತ್ತು ರತ್ನ ಪರೀಕ್ಷೆಗಳ ಫಲಿತಾಂಶ ಪ್ರಕಟವಾಗಿದ್ದು, ಶೇ 52ರಷ್ಟು ಅಭ್ಯರ್ಥಿಗಳು ಉತ್ತೀರ್ಣರಾಗಿದ್ದಾರೆ.
ರಾಜ್ಯದ 18 ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗಿತ್ತು. ನಾಲ್ಕು ವಿಭಾಗದಿಂದ ಪರೀಕ್ಷೆ ಕಟ್ಟಿದ್ದ 1,190 ಅಭ್ಯರ್ಥಿಗಳಲ್ಲಿ, 902 ಮಂದಿ ಪರೀಕ್ಷೆಗೆ ಹಾಜರಾಗಿದ್ದರು. ಅವರಲ್ಲಿ 596 ಮಂದಿ ತೇರ್ಗಡೆಯಾಗಿದ್ದಾರೆ. ಫಲಿತಾಂಶದ ಪಟ್ಟಿಯನ್ನು ಪರಿಷತ್ತಿನ ಅಂತರ್ಜಾಲ ತಾಣ www.kasapa.in ನಲ್ಲಿ ಪ್ರಕಟಿಸಲಾಗಿದೆ ಎಂದು ಕಸಾಪ ಅಧ್ಯಕ್ಷ ಮಹೇಶ ಜೋಶಿ ತಿಳಿಸಿದ್ದಾರೆ.
ಅಂಕಪಟ್ಟಿ ಹಾಗೂ ಪ್ರಮಾಣಪತ್ರಗಳನ್ನು ಶೀಘ್ರದಲ್ಲಿಯೇ ಎಲ್ಲ ಅಭ್ಯರ್ಥಿಗಳಿಗೆ ಪರಿಷತ್ತಿನ ಪರೀಕ್ಷಾ ವಿಭಾಗದಿಂದ ಅಂಚೆಯ ಮೂಲಕ ಕಳುಹಿಸಲಾಗುವುದು. ಮರು ಮೌಲ್ಯಮಾಪನ ಹಾಗೂ ಮರು ಎಣಿಕೆಗೆ ಅರ್ಜಿ ಸಲ್ಲಿಸಲು ಅಂಕಪಟ್ಟಿ ಕಳುಹಿಸಿದ ದಿನಾಂಕದಿಂದ ಒಂದು ತಿಂಗಳು ಕಾಲಾವಕಾಶವಿರುತ್ತದೆ. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 080 26623584 ಸಂಪರ್ಕಿಸಿ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.