ಮಂಗಳವಾರ, ಅಕ್ಟೋಬರ್ 27, 2020
24 °C

ಕಾಲಭೈರವೇಶ್ವರ ಜಾನಪದ ಕಲಾಮೇಳ ರದ್ದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನಾಗಮಂಗಲ: ‘ಆದಿಚುಂಚನಗಿರಿ ಯಲ್ಲಿ ಪ್ರತಿವರ್ಷ ನಡೆಯುತ್ತಿದ್ದ ರಾಜ್ಯಮಟ್ಟದ ಕಾಲಭೈರವೇಶ್ವರ ಜಾನಪದ ಕಲಾ ಮೇಳವನ್ನು ಕೋವಿಡ್ ಕಾರಣ ರದ್ದುಪಡಿಸಲಾಗಿದೆ’ ಎಂದು ಆದಿಚುಂಚನಗಿರಿ ಮಠದ ಪ್ರಧಾನ ಕಾರ್ಯದರ್ಶಿ ಪ್ರಸನ್ನನಾಥ ಸ್ವಾಮೀಜಿ ಹೇಳಿದರು.

‘ಮಠವು ಜಾನಪದ ಕಲೆ ಮತ್ತು ಸಂಸ್ಕೃತಿಯನ್ನು ಪ್ರಸರಣ ಮಾಡುವ ಉದ್ದೇಶದಿಂದ ನಾಲ್ಕು ದಶಕಗಳಿಂದ ಪ್ರತಿವರ್ಷ ರಾಜ್ಯಮಟ್ಟದ ಕಾಲಭೈರವೇಶ್ವರ ಜಾನಪದ ಕಲಾ ಮೇಳವನ್ನು ಆಯೋಜಿಸುತ್ತಾ ಬಂದಿದೆ. ಈ ಮೇಳಕ್ಕೆ ರಾಜ್ಯದ ವಿವಿಧ ಭಾಗಗಳಿಂದ 20 ಸಾವಿರಕ್ಕೂ ಅಧಿಕ ಕಲಾವಿದರು ಬರುತ್ತಿದ್ದರು. ಆದರೆ, ಈಗ ಕೋವಿಡ್ ಪ್ರಕರಣ ಹೆಚ್ಚುತ್ತಿದ್ದು, ಜನರ ಆರೋಗ್ಯದ ಹಿತದೃಷ್ಟಿಯಿಂದ ಮೇಳ ರದ್ದು
ಪಡಿಸಲಾಗಿದೆ’ ಎಂದು ಸುದ್ದಿಗೋಷ್ಠಿಯಲ್ಲಿ ಅವರು ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು