ಶನಿವಾರ, ಜನವರಿ 29, 2022
19 °C

ಎಂ.ಎಂ. ಕಲಬುರ್ಗಿ ಹತ್ಯೆ ಆರೋಪಿಗಳು ನ್ಯಾಯಾಲಯಕ್ಕೆ ಹಾಜರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ಎಂ ಎಂ ಕಲಬುರ್ಗಿ ಹತ್ಯೆ ಪ್ರಕರಣದ ಇಬ್ವರು ಆರೋಪಿಗಳನ್ನು ಬೈಕ್ ಕಳ್ಳತನ ಆರೋಪದ ವಿಚಾರಣೆಗಾಗಿ ಪೊಲೀಸರು ಹುಬ್ಬಳ್ಳಿ 1ನೇ ಜೆಎಂಎಫ್ ಸಿ ನ್ಯಾಯಾಲಯಕ್ಕೆ ಬುಧವಾರ ಹಾಜರುಪಡಿಸಿದರು.

ಮುಂಬೈ ಜೈಲಿನಿಂದ ಹುಬ್ಬಳ್ಳಿಗೆ ಕರೆ ತಂದಿದ್ದ ಗ್ರಾಮೀಣ ಠಾಣೆ ಪೊಲೀಸರು, ವಿಚಾರಣೆ ಮುಗಿದ ನಂತರ ಬೈಕ್ ಮಹಜರು ನಡೆಸಲು ಠಾಣೆಗೆ ಕರೆದೊಯ್ದಿದ್ದಾರೆ.

ಎಂ ಎಂ ಕಲಬುರ್ಗಿ ಹತ್ಯೆ ಪ್ರಕರಣದಲ್ಲಿ ಬಳಸಲಾಗಿದೆ ಎನ್ನಲಾದ ಬೈಕ್‌ ಅನ್ನು ಹುಬ್ಬಳ್ಳಿ ತಾಲ್ಲೂಕಿನ ಮಾವನೂರಿನಿಂದ ಕಳ್ಳತನ ಮಾಡಿದ್ದರು ಎಂದು ತನಿಖೆಯಲ್ಲಿ ಗೊತ್ತಾಗಿದೆ ಗ್ರಾಮೀಣ ಠಾಣೆ ಸಿಪಿಐ ರಮೇಶ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು