ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಳಸಾ ತಿರುವು ಯೋಜನೆ: ಪರಿಶೀಲನೆ ಇಂದು

Last Updated 9 ಜನವರಿ 2023, 19:32 IST
ಅಕ್ಷರ ಗಾತ್ರ

ನವದೆಹಲಿ: ಮಹದಾಯಿ ಯೋಜನೆಯ ಭಾಗವಾದ ಕಳಸಾ ನಾಲಾ ತಿರುವು ಯೋಜನೆಗೆ 33.05 ಹೆಕ್ಟೇರ್‌ ಮೀಸಲು ಅರಣ್ಯ ಬಳಕೆಗೆ ಪರಿಸರ ಅನುಮೋದನೆ ನೀಡುವುದಕ್ಕೆ ಸಂಬಂಧಿಸಿದಂತೆ ಕೇಂದ್ರ ಅರಣ್ಯ, ಪರಿಸರ ಹಾಗೂ ತಾಪಮಾನ ಬದಲಾವಣೆ ಸಚಿವಾಲಯದ ಸಹಾಯಕ ಮಹಾನಿರ್ದೇಶಕರು (ಎಐಜಿ) ಯೋಜನಾ ಪ್ರದೇಶಕ್ಕೆ ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.

ಈ ಯೋಜನೆಗೆ ಬೆಳಗಾವಿ ಜಿಲ್ಲೆಯಖಾನಾಪುರ ತಾಲ್ಲೂಕಿನ ಏಳು ಗ್ರಾಮಗಳ ಅರಣ್ಯ ಬಳಸಲು (ಜಾಕ್‌ವೆಲ್‌ ನಿರ್ಮಾಣ, ಪಂಪ್‌ ಹೌಸ್‌, ಎಲೆಕ್ಟ್ರಿಕಲ್‌ ಸಬ್‌ ಸ್ಟೇಷನ್‌, ಪೈಪ್‌ಲೈನ್‌ಗೆ) ಒಪ್ಪಿಗೆ ನೀಡುವಂತೆ ಎಸಿಎಸ್‌ ಅವರು ಸಚಿವಾಲಯಕ್ಕೆ 2022ರ ಡಿಸೆಂಬರ್ 30ರಂದು ಪ್ರಸ್ತಾವನೆ ಸಲ್ಲಿಸಿದ್ದರು.

ಈ ವಿಷಯದ ಬಗ್ಗೆ ಇನ್ನಷ್ಟು ವಿವರಣೆ ನೀಡುವಂತೆ ಕರ್ನಾಟಕ ಅರಣ್ಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಎಸಿಎಸ್‌) ಜಾವೆದ್‌ ಅಖ್ತರ್‌ ಅವರಿಗೆ ಪರಿಸರ ಸಚಿವಾಲಯದ ಸಮಗ್ರ ಪ್ರಾದೇಶಿಕ ಕೇಂದ್ರದ ಉಪ ಮಹಾನಿರ್ದೇಶಕ ಎಂ.ಕೆ.ಶಂಭು ಅವರು ಜನವರಿ 5ರಂದು ಪತ್ರ ಬರೆದು ಸೂಚಿಸಿದ್ದಾರೆ. ಈ ಯೋಜನಾ ಪ್ರದೇಶವು ವನ್ಯಜೀವಿ ಧಾಮ ಹಾಗೂ ಪರಿಸರ ಸೂಕ್ಷ್ಮ ಪ್ರದೇಶದ ಸಮೀಪದಲ್ಲಿದೆ. ಹೀಗಾಗಿ, ಮುಖ್ಯ ವನ್ಯಜೀವಿ ವಾರ್ಡನ್‌ (ಪಿಸಿಸಿಎಫ್‌) ಅವರು ಸೂಕ್ತ ಶಿಫಾರಸು ಹಾಗೂ ಪರಿಹಾರ ಕ್ರಮಗಳ ವಿವರಗಳನ್ನು ಒದಗಿಸಬೇಕು ಎಂದು ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT