ಮಂಗಳವಾರ, ಜನವರಿ 31, 2023
27 °C

ಕಲಬುರಗಿ ನಗರದಲ್ಲಿ 'ಪೇಸಿಎಂ' ಪೋಸ್ಟರ್

'ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರಗಿ: ಕ್ಯೂಆರ್ ಕೋಡ್‌ನಲ್ಲಿ ಮುಖ್ಯಮಂತ್ರಿ‌ ಬಸವರಾಜ‌ ಬೊಮ್ಮಾಯಿ ಅವರ ಭಾವಚಿತ್ರ ಇರುವ 'ಪೇಸಿಎಂ' ಎಂಬ ಪೋಸ್ಟರ್‌ಗಳನ್ನು ನಗರದ ಹಲವೆಡೆ ಅಂಟಿಸಲಾಗಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಲಬುರಗಿ ತಾಲ್ಲೂಕಿನ ಮಡಿಯಾಳ ತಾಂಡಾದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಮಕ್ಕಳ ದಿನಾಚರಣೆ ಹಾಗೂ 'ವಿವೇಕ' ಯೋಜನೆಯಡಿ ಶಾಲಾ ಕೊಠಡಿಗಳ ನಿರ್ಮಾಣ ಯೋಜನೆಗೆ ಚಾಲನೆ ಮತ್ತು ಸೇಡಂ ಪಟ್ಟಣದ ತಾಲ್ಲೂಕು ಕ್ರೀಡಾಂಗಣದಲ್ಲಿ 69ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮ ಉದ್ಘಾಟನೆಗೆ ಸೋಮವಾರ ಜಿಲ್ಲೆಗೆ ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಪೇಸಿಎಂ ಪೋಸ್ಟರ್ ಅಂಟಿಸಲಾಗಿದೆ.

ಈಚೆಗೆ ಚಿತ್ತಾಪುರ ಪಟ್ಟಣದಲ್ಲಿ ಶಾಸಕ ಪ್ರಿಯಾಂಕ್ ಖರ್ಗೆ ಕಾಣೆಯಾಗಿದ್ದಾರೆ ಎಂದು ಪಟ್ಟಣದ ಹಲವಡೆ ಪೋಸ್ಟರ್ ಅಂಟಿಸಲಾಗಿತ್ತು. ಈಗ ಪೇಸಿಎಂ ಪೋಸ್ಟರ್‌ಗಳನ್ನು ನಗರದ ಸಂಗಮೇಶ್ವರ ಕಾಲೊನಿ, ಟ್ಯಾಂಕ್ ಬಂಡ್ ರಸ್ತೆ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಪೋಸ್ಟರ್ ಅಂಟಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು