ಗುರುವಾರ , ಫೆಬ್ರವರಿ 9, 2023
30 °C

ಶಿಕ್ಷಣದಲ್ಲಿ ಕೇಸರೀಕರಣ ಇಲ್ಲ: ಬೊಮ್ಮಾಯಿ

'ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರಗಿ: ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗಾಗಿ ರಾಜ್ಯದಾದ್ಯಂತ ವಿವೇಕ ಹೆಸರಿನ ಶಾಲಾ ಕೊಠಡಿಗಳನ್ನು ನಿರ್ಮಿಸಲಾಗುತ್ತಿದೆ. ವಿವೇಕರ ಹೆಸರಿನಲ್ಲಿ ಕೊಠಡಿ ನಿರ್ಮಾಣ ಮಾಡುವುದು ಕೇಸರೀಕರಣವಾಗುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದರು.

ಕಲಬುರಗಿ ವಿಮಾನ ನಿಲ್ದಾಣದ ಬಳಿ ಇರುವ ಮಡಿಹಾಳ ಗ್ರಾಮದಲ್ಲಿ ಸೋಮವಾರ ವಿವೇಕ ಹೆಸರಿನ ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಹಲವು ಕಡೆಗಳಲ್ಲಿ ಶಾಲಾ ಕೊಠಡಿಗಳು ಶಿಥಿಲಾವಸ್ಥೆಯಲ್ಲಿವೆ. ಹೀಗಾಗಿ ರಾಜ್ಯ ಸರ್ಕಾರ 7601 ಶಾಲಾ ಹಾಗೂ ಕಾಲೇಜುಗಳ ಕೊಠಡಿಗಳನ್ನು ನಿರ್ಮಿಸಲಾಗುತ್ತಿದೆ. ಸ್ವಾಮಿ ವಿವೇಕಾನಂದರು ಧರಿಸಿದ್ದು ಖಾವಿ, ರಾಷ್ಟ್ರಧ್ವಜದಲ್ಲಿರುವುದು ಕೇಸರಿ ಬಣ್ಣ. ಹಾಗಾಗಿ ನೂತನ ಕೊಠಡಿಗಳು ಕೇಸರಿ ಬಣ್ಣದಲ್ಲಿ ಇದ್ದರೆ ತಪ್ಪೇನು? ಈ ಯೋಜನೆಯನ್ನು ವಿರೋಧಿಸುವವರು ಅಭಿವೃದ್ಧಿಯನ್ನು ಸಹಿಸದವರು ಎಂದರು.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ.ಸಿ.‌ನಾಗೇಶ್, ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ್ ನಿರಾಣಿ, ಕೆಕೆಆರ್ ಡಿಬಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ, ಸಂಸದ ಡಾ. ಉಮೇಶ ಜಾಧವ, ಶಾಸಕರಾದ ಬಸವರಾಜ ಮತ್ತಿಮಡು, ಸುಭಾಷ್ ಗುತ್ತೇದಾರ, ಡಾ.ಅವಿನಾಶ್ ಜಾಧವ, ವಿಧಾನ ಪರಿಷತ್ ಸದಸ್ಯರಾದ ಬಾಬುರಾವ್ ಚಿಂಚನಸೂರ, ಶಶೀಲ್ ನಮೋಶಿ, ಬಿ.ಜಿ. ಪಾಟೀಲ ಇತರರು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು