ಗುರುವಾರ , ಜನವರಿ 28, 2021
27 °C

ಆನ್‌ಲೈನ್ ತರಗತಿ ಮಾತುಕತೆಗೆ ಆಹ್ವಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಶುಲ್ಕ ಪಾವತಿಸದಿರುವ ಮಕ್ಕಳಿಗೆ ಆನ್‌ಲೈನ್‌ ಶಿಕ್ಷಣವನ್ನು ಮುಂದುವರಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದ ಖಾಸಗಿ ಶಾಲಾ ಆಡಳಿತ ಮಂಡಳಿಗಳನ್ನು ರಾಜ್ಯ ಸರ್ಕಾರ ಶುಕ್ರವಾರ ಮಾತುಕತೆಗೆ ಆಹ್ವಾನಿಸಿದೆ.

ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ವಿ. ಅನ್ಬುಕುಮಾರ್, ವಿವಿಧ ಶಾಲಾ ಆಡಳಿತ ಮಂಡಳಿ ಸಂಘಟನೆಗಳ ರಾಜ್ಯ ಘಟಕಗಳ ಪದಾಧಿಕಾರಿಗಳ ಸಭೆ ಕರೆದಿದ್ದಾರೆ. ಆಯುಕ್ತರ ಕಚೇರಿಯಲ್ಲಿ ಬೆಳಿಗ್ಗೆ 11ಕ್ಕೆ ಸಭೆ ಪ್ರಾರಂಭವಾಗಲಿದೆ. 

‘ಸಭೆಯಲ್ಲಿ ಕರ್ನಾಟಕ ಖಾಸಗಿ ಇಂಗ್ಲಿಷ್ ಮಾಧ್ಯಮ ಶಾಲೆಗಳ ಆಡಳಿತ ಮಂಡಳಿಗಳ ಒಕ್ಕೂಟ (ಕ್ಯಾಮ್ಸ್‌), ಕರ್ನಾಟಕ ಅನುದಾನರಹಿತ ಶಾಲಾ ಆಡಳಿತ ಮಂಡಳಿಗಳ ಸಂಘ (ಕುಸ್ಮಾ), ಸ್ವತಂತ್ರ ಸಿಬಿಎಸ್‌ಇ ಶಾಲಾ ಆಡಳಿತ ಮಂಡಳಿಗಳ ಸಂಘ (ಮಿಕ್ಸಾ) ಸೇರಿ ಪ್ರಮುಖ ರಾಜ್ಯ ಸಂಘಟನೆಗಳ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ’ ಎಂದು ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

‘ಶಿಕ್ಷಣ ಸಚಿವರು ಸಭೆಯಲ್ಲಿ ಭಾಗವಹಿಸದಿರುವ ಬಗ್ಗೆ ಬೇಸರ ಇದೆ. ಆನ್‌ಲೈನ್ ತರಗತಿಗಳ ಶುಲ್ಕ ಅನಿವಾರ್ಯವಾಗಿದೆ. ನ. 30ರೊಳಗೆ ಈ ಸಮಸ್ಯೆ ಬಗೆ ಹರಿಸಬೇಕು. ಇಲ್ಲದಿದ್ದರೆ ತರಗತಿಗಳನ್ನು ಸ್ಥಗಿತಗೊಳಿಸಬೇಕಾಗುತ್ತದೆ. ಇದರಲ್ಲಿ ರಾಜಿ ಇಲ್ಲ’ ಎಂದು ಕ್ಯಾಮ್ಸ್‌ನ ಪ್ರಧಾನ ಕಾರ್ಯದರ್ಶಿ ಡಿ. ಶಶಿಕುಮಾರ್ ಹೇಳಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು