ಶುಕ್ರವಾರ, 2 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕನಕಪುರ: ಜಾನುವಾರು ಸಾಗಿಸುತ್ತಿದ್ದ ವ್ಯಕ್ತಿ ಅನುಮಾನಾಸ್ಪದ ಸಾವು

ರಾಷ್ಟ್ರ ರಕ್ಷಣಾ ಪಡೆ ಸಂಘಟನೆ ಕಾರ್ಯಕರ್ತರ ದಾಳಿ ಆರೋಪ
Last Updated 1 ಏಪ್ರಿಲ್ 2023, 18:58 IST
ಅಕ್ಷರ ಗಾತ್ರ

ಕನಕಪುರ: ತಾಲ್ಲೂಕಿನ ಸಾತನೂರು ಬಳಿ ಶುಕ್ರವಾರ ಮಧ್ಯರಾತ್ರಿ ವಾಹನದಲ್ಲಿಜಾನುವಾರು ಸಾಗಿಸುತ್ತಿದ್ದ ವ್ಯಕ್ತಿಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ.

‘ಮಂಡ್ಯ ಮೂಲದ ಇರ್ಗೀಷ್‌ ಪಾಷ (45) ಮೃತ ವ್ಯಕ್ತಿ. ಇವರು ವಾಹನದಲ್ಲಿ ಜಾನುವಾರು ಸಾಗಿಸುತ್ತಿದ್ದ ವೇಳೆ ರಾಷ್ಟ್ರ ರಕ್ಷಣಾ ಪಡೆ ಸಂಘಟನೆಯ ಮುಖಂಡ ಪುನೀತ್‌ ಕೆರೆಹಳ್ಳಿ ನೇತೃತ್ವದ ತಂಡ 16 ಜಾನುವಾರುಗಳನ್ನು ರಕ್ಷಿಸಿತ್ತು’ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸಂದರ್ಭ ವಾಹನದಿಂದ ಇಳಿದು ಇರ್ಗೀಷ್‌ ಪಾಷ ಅವರು ಓಡಿಹೋಗಿದ್ದರು. ಘಟನೆ ನಡೆದ ಸ್ಥಳದಿಂದ ಸ್ವಲ್ಪ ದೂರದಲ್ಲಿಯೇ ಇರ್ಗೀಷ್ ಶವ ಪತ್ತೆಯಾಗಿದೆ.

‘ಇರ್ಗೀಷ್‌ ಅವರನ್ನು ಪುನೀತ್‌ ಕೆರೆಹಳ್ಳಿ ಹಾಗೂ ಮತ್ತಿತರರೇ ಹಲ್ಲೆ ನಡೆಸಿ, ಕೊಲೆ ಮಾಡಿದ್ದಾರೆ. ಅವರನ್ನು ಬಂಧಿಸಬೇಕು’ ಎಂದು ಆರೋಪಿಸಿ ಅವರ ಕುಟುಂಬಸ್ಥರು ಶನಿವಾರ ಸಾತನೂರು ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಿದರು.

‘ಇರ್ಗೀಷ್‌ ಸಾವಿಗೆ ನಿಖರ ಕಾರಣ ಏನೆಂಬುದು ಮರಣೋತ್ತರ ಪರೀಕ್ಷೆಯ ನಂತರವಷ್ಟೇ ತಿಳಿಯಲಿದೆ. ಅದನ್ನು ಆಧರಿಸಿ ಕ್ರಮ
ಕೈಗೊಳ್ಳಲಾಗುವುದು’ ಎಂದು ಪೊಲೀಸರು ತಿಳಿಸಿದ್ದಾರೆ. ಸಾತನೂರು ಠಾಣೆಯಲ್ಲಿ ದೂರು ದಾಖಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT