ಬುಧವಾರ, ಅಕ್ಟೋಬರ್ 20, 2021
29 °C

‘ಮನೆಯಂಗಳದಲ್ಲಿ ಮಾತುಕತೆ’ ನಾಳೆ ಪುನರಾರಂಭ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಕೊರೊನಾ ಸೋಂಕು ಕಾಣಿಸಿಕೊಂಡ ಬಳಿಕ ಸ್ಥಗಿತಗೊಂಡಿದ್ದ ‘ಮನೆಯಂಗಳದಲ್ಲಿ ಮಾತುಕತೆ’ ತಿಂಗಳ ಕಾರ್ಯಕ್ರಮವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪುನರಾರಂಭಿಸಿದೆ. 

ಒಂದು ವರ್ಷದ ಏಳು ತಿಂಗಳ ಬಳಿಕ ಈ ಕಾರ್ಯಕ್ರಮ ನಡೆಯುತ್ತಿದ್ದು, ಇದೇ ಶನಿವಾರ ಸಂಜೆ 4 ಗಂಟೆಗೆ ಕನ್ನಡ ಭವನದ ನಯನ ಸಭಾಂಗಣದಲ್ಲಿ 216ನೇ ಕಾರ್ಯಕ್ರಮವನ್ನು ಇಲಾಖೆ ಆಯೋಜಿಸಿದೆ. ತಿಂಗಳ ಅತಿಥಿಯಾಗಿ ರಂಗ ನಟ ಹಾಗೂ ನಿರ್ದೇಶಕ ಬಿ.ವಿ. ರಾಜಾರಾಮ್ ಭಾಗವಹಿಸಲಿದ್ದಾರೆ. 

ಕಲೆ, ಸಾಹಿತ್ಯ, ವಿಜ್ಞಾನ ಸೇರಿದಂತೆ ವಿವಿಧ ಕ್ಷೇತ್ರಗಳ ನಾಡಿನ ಸಾಧಕರನ್ನು ಸಾರ್ವಜನಿಕರೊಂದಿಗೆ ಮುಖಾಮುಖಿಯಾಗಿಸುವುದು ಕಾರ್ಯಕ್ರಮದ ಉದ್ದೇಶ. ಇದನ್ನು 2001ರಲ್ಲಿ ಪ್ರಾರಂಭಿಸಲಾಗಿತ್ತು. 215ನೇ ಕಾರ್ಯಕ್ರಮದ ಅತಿಥಿಯಾಗಿ ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷರಾದ ಬಿ. ಮಂಜಮ್ಮ ಜೋಗತಿ ಭಾಗವಹಿಸಿದ್ದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.