ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭೂತಾರಾಧನೆ, ದೈವನರ್ತಕರಿಗೆ ಮಾಸಾಶನ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆದೇಶ

Last Updated 20 ಅಕ್ಟೋಬರ್ 2022, 9:22 IST
ಅಕ್ಷರ ಗಾತ್ರ

ಬೆಂಗಳೂರು: ಭೂತಾರಾಧನೆ (ಕೋಲ, ನೇಮೋತ್ಸವ), ದೈವ ನರ್ತನ ಕಲಾವಿದರಿಗೆ ಮಾಸಾಶನ ನೀಡುವುದಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆದೇಶ ಹೊರಡಿಸಿದೆ.

‘ಕರ್ನಾಟಕ ಸಂಸ್ಕೃತಿ, ಆಚರಣೆಗಳ ನೆಲೆಬೀಡು. ಅದರಲ್ಲಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಭೂತಾರಾಧನೆಯು ಸಹ ಒಂದು. ಭೂತಾರಾಧನೆ, ದೈವ ನರ್ತನ ಮಾಡುವ ಕಲಾವಿದರ ಹಿತದೃಷ್ಟಿಯನ್ನು ಗಮನಿಸಿ, 60 ವರ್ಷ ತುಂಬಿದ ದೈವನರ್ತಕರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ₹2 ಸಾವಿರ ಮಾಸಾಶನ ನೀಡಲು ನಿರ್ಧರಿಸಲಾಗಿದೆ’ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್ ಫೇಸ್‌ಬುಕ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಇತ್ತೀಚೆಗೆ ಬಿಡುಗಡೆಯಾದ ನಟ ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ‘ಕಾಂತಾರ’ ಸಿನಿಮಾದಲ್ಲಿ ಕರಾವಳಿ ಭಾಗದ ದೈವಗಳ ಆರಾಧನೆ, ತುಳು ಸಂಸ್ಕೃತಿಯನ್ನು ಪ್ರಧಾನವಾಗಿ ಬಿಂಬಿಸಲಾಗಿದೆ. ಪ್ರಕೃತಿಗೂ, ಮನುಷ್ಯನಿಗೂ ಇರುವ ಸಂಬಂಧ, ಭೂತಾರಾಧನೆ, ಈ ಆಚರಣೆ ನ್ಯಾಯದ ವೇದಿಕೆಯಾಗಿ ಹೇಗೆ ಮಹತ್ವ ಪಡೆದಿದೆ ಎನ್ನುವುದನ್ನು ಸಿನಿಮಾದಲ್ಲಿ ವಿವರಿಸಲಾಗಿದೆ.

ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT