ಬುಧವಾರ, ಆಗಸ್ಟ್ 17, 2022
26 °C

‘ಕನಕ ಶ್ರೀ ಪ್ರಶಸ್ತಿ’ ಪ್ರದಾನ ಇಂದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಕನಕದಾಸ ಜಯಂತಿ ಕಾರ್ಯಕ್ರಮವನ್ನು ಗುರುವಾರ (ಡಿ.3) ಬೆಳಿಗ್ಗೆ 11 ಗಂಟೆಗೆ ರವೀಂದ್ರ ಕಲಾಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದು, ದಾವಣಗೆರೆಯ ಯುಗಧರ್ಮ ರಾಮಣ್ಣ ಅವರಿಗೆ 2020ನೇ ಸಾಲಿನ ‘ಕನಕ ಶ್ರೀ ಪ್ರಶಸ್ತಿ’ಯನ್ನು ಪ್ರದಾನ ಮಾಡಲಾಗುತ್ತದೆ.

ಕಲಬುರ್ಗಿ ವಿಭಾಗದ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠದ ಸಿದ್ದರಾಮಾನಂದ ಸ್ವಾಮೀಜಿ ಅವರು ಕಾರ್ಯಕ್ರಮದ ಸಾನ್ನಿಧ್ಯ  ವಹಿಸಲಿದ್ದಾರೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಇದೇ ವೇಳೆ ಪ್ರೊ.ಬಿ. ಶಿವರಾಮ ಶೆಟ್ಟಿ ಹಾಗೂ ಹಾವೇರಿಯ ಡಾ. ಶಶಿಧರ್ ಜಿ. ವೈದ್ಯ ಅವರಿಗೆ ‘ಕನಕ ಗೌರವ ಪುರಸ್ಕಾರ’ವನ್ನು ಪ್ರದಾನ ಮಾಡಲಾಗುತ್ತದೆ. ಉಡುಪಿಯ ಡಾ. ಕಾತ್ಯಾಯಿನಿ ಕುಂಜಿಬೆಟ್ಟು ಹಾಗೂ ಬೆಂಗಳೂರಿನ ಡಾ. ನರಸಿಂಹಮೂರ್ತಿ ಹೂವಿನಹಳ್ಳಿ ಅವರಿಗೆ ‘ಕನಕ ಯುವ ಪುರಸ್ಕಾರ’ ನೀಡಿ ಗೌರವಿಸಲಾಗುತ್ತದೆ. 

‘ಕನಕ ಶ್ರೀ’ ಪ್ರಶಸ್ತಿಯು ₹ 5 ಲಕ್ಷ ನಗದು ಹಾಗೂ ಫಲಕವನ್ನು ಒಳಗೊಂಡಿದೆ. ‘ಕನಕ ಗೌರವ ಪ್ರಶಸ್ತಿ’ಯು ₹ 75 ಸಾವಿರ ನಗದು ಹಾಗೂ ಫಲಕ, ‘ಕನಕ ಯುವ ಪುರಸ್ಕಾರ’ವು ₹ 50 ಸಾವಿರ ನಗದು ಹಾಗೂ ಫಲಕವನ್ನು ಒಳಗೊಂಡಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು