ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗ್ರಾಹಕರಿಗೆ ಕನ್ನಡದಲ್ಲಿಯೇ ಸೇವೆ ಒದಗಿಸಿ: ಟಿ.ಎಸ್. ನಾಗಾಭರಣ

ಭಾರತೀಯ ಸ್ಟೇಟ್ ಬ್ಯಾಂಕಿನ ಅಧಿಕಾರಿಗಳಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ತಾಕೀತು
Last Updated 17 ಮೇ 2022, 16:10 IST
ಅಕ್ಷರ ಗಾತ್ರ

ಬೆಂಗಳೂರು: ‘ಕರ್ನಾಟಕದಲ್ಲಿ ಕನ್ನಡವೇ ಸಾರ್ವಭಾಮ ಭಾಷೆ. ಇಲ್ಲಿ ನೆಲೆಸಿರುವ ಕನ್ನಡಿಗರೆಲ್ಲರಿಗೂ ಕನ್ನಡದಲ್ಲಿ ಮಾಹಿತಿ ಹಾಗೂ ಸೇವೆ ಒದಗಿಸಬೇಕು’ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್. ನಾಗಾಭರಣ ಅವರುಭಾರತೀಯ ಸ್ಟೇಟ್ ಬ್ಯಾಂಕಿನ (ಎಸ್‌ಬಿಐ) ಅಧಿಕಾರಿಗಳಿಗೆ ತಾಕೀತು ಮಾಡಿದರು.

ಬ್ಯಾಂಕಿನ ಪ್ರಧಾನ ಕಚೇರಿಯಲ್ಲಿಕನ್ನಡ ಅನುಷ್ಠಾನ ಪ್ರಗತಿ ಪರಿಶೀಲನಾ ಸಭೆಯನ್ನು ಮಂಗಳವಾರ ನಡೆಸಿದ ಅವರು, ‘ಚೆಕ್‌ಗಳು, ಚಲನ್‌ಗಳು, ಪಾಸ್‌ಬುಕ್ ಮುದ್ರಣ, ಎಟಿಎಂ ಕೇಂದ್ರಗಳು ಸೇರಿದಂತೆ ವಿವಿಧೆಡೆ ಕನ್ನಡ ಭಾಷೆಯ ಆಯ್ಕೆ ನೀಡದಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬರುತ್ತಿವೆ.ಕರ್ನಾಟಕದ ಸಂಪನ್ಮೂಲಗಳನ್ನು ಬಳಸಿಕೊಂಡು ವ್ಯವಹಾರ ನಡೆಸುತ್ತಿರುವ ಬ್ಯಾಂಕ್, ಕನ್ನಡಿಗರಿಗೆ ಕನ್ನಡದಲ್ಲಿಯೇ ಸೇವೆ ಒದಗಿಸಬೇಕು’ ಎಂದು ಸೂಚಿಸಿದರು.

ಪ್ರಾಧಿಕಾರದ ಕಾರ್ಯದರ್ಶಿ ಸಂತೋಷ ಹಾನಗಲ್ಲ, ಯುಕೋ ಬ್ಯಾಂಕಿನ ನಿವೃತ್ತ ಅಧಿಕಾರಿ ನಾಗೇಶ್, ಕೆನರಾ ಬ್ಯಾಂಕಿನ ವ್ಯವಸ್ಥಾಪಕ ಮುರಳಿಧರ್, ಭಾರತೀಯ ಸ್ಟೇಟ್ ಬ್ಯಾಂಕಿನ ಮುಖ್ಯ ಪ್ರಧಾನ ವ್ಯವಸ್ಥಾಪಕ ನಂದ್ ಕಿಶೋರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT