ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕನ್ನಡ ಕಡೆಗಣನೆ: ಶಾಲೆಗಳ ಎನ್‌ಒಸಿ ಹಿಂಪಡೆಯಲು ಆಗ್ರಹ

Last Updated 7 ಡಿಸೆಂಬರ್ 2021, 23:02 IST
ಅಕ್ಷರ ಗಾತ್ರ

ಬೆಂಗಳೂರು: ಕನ್ನಡ ಭಾಷಾ ಕಲಿಕಾ ಕಾಯ್ದೆ–2015 ಅನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸದ ಕೇಂದ್ರ ಪಠ್ಯಕ್ರಮದ ಶಾಲೆಗಳ ನಿರಾಕ್ಷೇಪಣಾ ಪತ್ರವನ್ನು (ಎನ್‌ಒಸಿ) ಹಿಂಪಡೆಯುವಂತೆ ಕನ್ನಡ ಅಭಿವೃದ್ಧಿ ಪ್ರಾಧಿಕಾರವು ಸರ್ಕಾರಕ್ಕೆ ಆಗ್ರಹಿಸಿದೆ.

ಈ ಬಗ್ಗೆ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್. ನಾಗಾಭರಣ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರಿಗೆ ಪತ್ರ ಬರೆದಿದ್ದಾರೆ.

‘ಕನ್ನಡ ಭಾಷಾ ಕಲಿಕಾ ಕಾಯ್ದೆ ಜಾರಿಯಾಗಿ ಹಲವು ವರ್ಷಗಳಾಗಿವೆ. ಈಗಲೂ ಕೇಂದ್ರ ಪಠ್ಯಕ್ರಮದ ಕೆಲ ಶಾಲೆಗಳು ಅದನ್ನು ಅನುಷ್ಠಾನಗೊಳಿಸಲು ಹಿಂದೇಟು ಹಾಕುತ್ತಿರುವುದು ವಿಷಾದನೀಯ. ಸದ್ಯ 499 ಸಿಬಿಎಸ್‌ಇ ಶಾಲೆಗಳು ಮತ್ತು 255 ಐಸಿಎಸ್‌ಇ ಶಾಲೆಗಳು ಬೆಂಗಳೂರಿನಲ್ಲಿ ಇವೆ. ಈ ಶಾಲೆಗಳಲ್ಲಿ ಓದುತ್ತಿರುವ ಶೇ 80 ರಷ್ಟು ಮಕ್ಕಳು ಸ್ಥಳೀಯ ಕನ್ನಡಿಗರೇ ಆಗಿದ್ದಾರೆ. ಆದರೆ, ಅವರುಗಳಿಗೆ ಕನ್ನಡ ಭಾಷಾ ಕಲಿಕಾ ಕಾಯ್ದೆಯ ಅನ್ವಯ ಕನ್ನಡವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಕಲಿಸಲಾಗುತ್ತಿಲ್ಲ’ ಎಂದು ಬೇಸರ
ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT