ಬೆಂಗಳೂರು: ‘ರಾಜ್ಯದಲ್ಲಿರುವ ಯಾವುದೇ ಪಠ್ಯಕ್ರಮದ ಶಾಲೆಗಳೇ ಆಗಲಿ ಕನ್ನಡವನ್ನು ಪ್ರಥಮ ಇಲ್ಲವೇ ದ್ವಿತೀಯ ಭಾಷೆಯನ್ನಾಗಿ ಕಲಿಸುವುದು ಕಡ್ಡಾಯ. ಈ ಕುರಿತು ರಾಜ್ಯಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಿದೆ’ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್‌ಕುಮಾರ್ ಹೇಳಿದ್ದಾರೆ.

‘ಕನ್ನಡ ನೆಲದಲ್ಲಿರುವ ಯಾವುದೇ ಪಠ್ಯಕ್ರಮದ ಶಾಲೆಗಳಲ್ಲಿ ಕನ್ನಡ ಭಾಷೆಯನ್ನು ಒಂದು ಭಾಷೆಯನ್ನಾಗಿ ಕಲಿಸುವ ಸಂಬಂಧದ ಕನ್ನಡ ಕಲಿಕಾ ಅಧಿನಿಯಮ-2015ರ ಕಾಯ್ದೆ ಅನುಷ್ಠಾನದಲ್ಲಿ ಯಾವುದೇ ರಾಜಿಯೇ ಇಲ್ಲ’ ಎಂದೂ ಅವರು ಸ್ಪಷ್ಟಪಡಿಸಿದ್ದಾರೆ.

‘ಕೇಂದ್ರ ಪಠ್ಯಕ್ರಮದ ಶಾಲೆಗಳಲ್ಲಿ ಕನ್ನಡ ಕಲಿಸುವುದನ್ನು ವಿರೋಧಿಸುತ್ತಿರುವ ಹೊರ ರಾಜ್ಯದ ಪೋಷಕರ ಒಂದು ವರ್ಗ, ಕನ್ನಡ ಕಲಿಕೆಯನ್ನು ಕೈಬಿಡಬೇಕೆಂದು ಸಾಮಾಜಿಕ ಜಾಲತಾಣದ ಮೂಲಕ ಒತ್ತಾಯಿಸುತ್ತಿದೆ. ಇದು ಕಾಯ್ದೆಗೆ ವಿರುದ್ಧವಾಗಿದೆ. ಈ ಕುರಿತಂತೆ ರಾಜ್ಯದ ಯಾವುದೇ ಪಠ್ಯಕ್ರಮದ ಶಾಲೆಗಳು ಅಂಥವರ ಆಗ್ರಹಕ್ಕೂ ಮಣಿಯದೇ ಕಡ್ಡಾಯವಾಗಿ ಕನ್ನಡ ಕಲಿಸಬೇಕು’ ಎಂದೂ ಅವರು ಸೂಚನೆ ನೀಡಿದ್ದಾರೆ.

ಪೋಷಕರ ಇಂತಹ ನಡೆಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್. ನಾಗಾಭರಣ ಅವರು ಸಚಿವರನ್ನು ಬುಧವಾರ ಭೇಟಿ ಮಾಡಿ ಮನವಿ ಸಲ್ಲಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.