ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಂಪಾ ಇನ್ನಿಲ್ಲ | ಕವಿ, ನಾಟಕಕಾರ ಪ್ರೊ.ಚಂದ್ರಶೇಖರ ಪಾಟೀಲ

Last Updated 10 ಜನವರಿ 2022, 6:48 IST
ಅಕ್ಷರ ಗಾತ್ರ

ಪ್ರೊ.ಚಂದ್ರಶೇಖರ ಪಾಟೀಲ

ಜನನ: 1939ರ ಜೂನ್‌ 18
ಹುಟ್ಟೂರು: ಹಾವೇರಿ ಜಿಲ್ಲೆ ಸವಣೂರು ತಾಲ್ಲೂಕಿನ ಹತ್ತಿಮತ್ತೂರು

ಶಿಕ್ಷಣ: ಹಾವೇರಿಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ, ಧಾರವಾಡದಲ್ಲಿ ಕಾಲೇಜು ಶಿಕ್ಷಣ, ಕರ್ನಾಟಕ ವಿಶ್ವವಿದ್ಯಾಲಯದಿಂದ ಇಂಗ್ಲಿಷ್ ಸ್ನಾತಕೋತ್ತರ (1962) ಪದವಿ, ಬ್ರಿಟಿಷ್‌ ಕೌನ್ಸಿಲ್‌ನ ವಿದ್ಯಾರ್ಥಿವೇತನ ಪಡೆದು ಇಂಗ್ಲೆಂಡ್‌ನ ಲೀಡ್ಸ್‌ ವಿಶ್ವವಿದ್ಯಾಲಯದಲ್ಲಿ ಎಂ.ಎ. (ಭಾಷಾಶಾಸ್ತ್ರ) ಪದವಿ ಮತ್ತು ಹೈದರಾಬಾದಿನ ಕೇಂದ್ರೀಯ ಇಂಗ್ಲಿಷ್‌ ಸಂಸ್ಥೆಯಿಂದ ಇಂಗ್ಲಿಷ್‌ ಅಧ್ಯಯನದ ಡಿಪ್ಲೊಮಾ.

ವೃತ್ತಿ: ಕರ್ನಾಟಕ ವಿಶ್ವವಿದ್ಯಾನಿಲಯದ ಇಂಗ್ಲಿಷ್ ವಿಭಾಗದ ಪ್ರಾಧ್ಯಾಪಕರಾಗಿ, ಛೇರ್‌ಮನ್‌ ಆಗಿ ನಿವೃತ್ತಿ.

ಕನ್ನಡ ಕೃತಿಗಳು: ಕನ್ನಡ ಕನ್ನಡ ಬರ್‍ರೀ ನಮ್ಮ ಸಂಗಡ, ಸಂಕ್ರಮಣ ಕಾವ್ಯ, ಗಾಂಧಿ ಗಾಂಧಿ, ಜೂನ್‌ 75 ಮಾರ್ಚ್ 77, ಬಂಡಾಯ ಮತ್ತು ಸಾಹಿತ್ಯ, ನೆಲ್ಸನ್‌ ಮಂಡೇಲಾ, ಕನ್ನಡನಾಡಿಗೊಂದು ಪ್ರಾದೇಶಿಕ ಪಕ್ಷ, ಸಂಕ್ರಮಣ ಸಾಹಿತ್ಯ (3 ಸಂಪುಟಗಳಲ್ಲಿ), ಗಾಂಧಿ ಎನ್ನುವ ಹೆಸರು... ಬೇಂದ್ರೆ-ನಾ ಕಂಡಂತೆ, ನನಗೆ ಕಂಡಷ್ಟು, 26 ದಿನ 25 ರಾತ್ರಿ,

ಇಂಗ್ಲಿಷ್‌ ಕೃತಿ: ಅಟ್‌ದಿ ಅದರ್‌ ಎಂಡ್‌ .

ಕವನ ಸಂಕಲನ: ಬಾನುಲಿ, ಮಧ್ಯಬಿಂದು, ಹತ್ತೊಂಬತ್ತು ಕವನಗಳು, ಗಾಂಧಿಸ್ಮರಣೆ, ಓ! ನನ್ನ ದೇಶ ಬಾಂಧವರೇ, ಹೂವು ಹೆಣ್ಣು ತಾರೆ, ಅರ್ಧ ಸತ್ಯದ ಹುಡುಗಿ, ಗುಂಡಮ್ಮನ ಹಾಡು, ಶಾಲ್ಮಲಾ ನನ್ನ ಶಾಲ್ಮಲಾ, ದೇವಬಾಗ..

ನಾಟಕಗಳು: ಕೊಡೆಗಳು, ಅಪ್ಪ, ಕುಂಟ ಕುಂಟ ಕುರುವತ್ತಿ, ಗುರ್ತಿನವರು, ಟಿಂಗರ ಬುಡ್ಡಣ್ಣ, ಕತ್ತಲರಾತ್ರಿ, ಗೋಕರ್ಣದ ಗೌಡಸಾನಿ, ಜಗದಂಬೆಯ ಬೀದಿನಾಟಕ, ಬುರಡಿ ಬಾಬನ ವಸ್ತ್ರಾಪಹರಣ ಪವಾಡ, ನಳ ಕವಿಯ ಮಸ್ತಕಾಭಿಷೇಕ, ವಂದಿಮಾಗಧ ...

ಪತ್ರಿಕೆ: ಸಂಕ್ರಮಣ (1964–2018) ಸಾಹಿತ್ಯ, ಚಳವಳಿ ವಿಚಾರಗಳನ್ನು ಒಳಗೊಂಡ ಬರಹಗಳ ಪತ್ರಿಕೆ.

ಸಂಘಟನೆ ಮತ್ತು ಹೋರಾಟ: ಗೋಕಾಕ ಚಳವಳಿಯಲ್ಲಿ ಪ್ರಮುಖಪಾತ್ರ ವಹಿಸಿದ್ದರು. ತುರ್ತು ಪರಿಸ್ಥಿತಿಯಲ್ಲಿ ಸಂದರ್ಭ 26 ದಿನ ಜೈಲುವಾಸವನ್ನೂ ಅನುಭವಿಸಿದ್ದರು. ಪ್ರಾಥಮಿಕ ಶಿಕ್ಷಣದಲ್ಲಿ ಕನ್ನಡವೇ ಬೋಧನಾ ಮಾಧ್ಯಮವಾಗಿರಬೇಕು, 5ನೇ ತರಗತಿಯಿಂದ ಇಂಗ್ಲಿಷ್‌ ಕಲಿಸಬಹುದು, ಕರ್ನಾಟಕದಲ್ಲಿನ ಕೇಂದ್ರೀಯ ಪಠ್ಯ ಕ್ರಮದ ಶಾಲೆಗಳಲ್ಲಿ ಕನ್ನಡ ಕಲಿಸಬೇಕೆಂಬ ವಿಚಾರಗಳಲ್ಲಿ ಹೋರಾಟ.

* ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ (1996-99); ಪ್ರತಿ ಶನಿವಾರ ‘ಪುಸ್ತಕ ಸಂತೆ’
* ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ (2004–08)
* ರಾಜ್ಯ ಬಂಡಾಯ ಸಾಹಿತ್ಯ ಸಂಘಟನೆಯ ಸಂಚಾಲಕ
* ಅಖಿಲ ಕರ್ನಾಟಕ ಕೇಂದ್ರ ಕನ್ನಡ ಕ್ರಿಯಾಸಮಿತಿಯ ಪ್ರಧಾನ ಕಾರ್ಯದರ್ಶಿ
* ಧಾರವಾಡದ ನಾಟಕ ಕೂಟದ ಕಾರ್ಯದರ್ಶಿ
* ಮ್ಯಾಳ ನಾಟಕ ಸಂಘದ ಕಾರ್ಯಾಧ್ಯಕ್ಷ
* ಕರ್ನಾಟಕ ವಿಶ್ವವಿದ್ಯಾಲಯದ ವಿಶ್ವಚೇತನ ಸಾಂಸ್ಕೃತಿಕ ವೇದಿಕೆಯ ನಿಯೋಜಕ

ಪ್ರಶಸ್ತಿಗಳು

* ರಾಜ್ಯ ಸಾಹಿತ್ಯ ಅಕಾಡೆಮಿ ಬಹುಮಾನ (1960,74,76)
* ರಾಜ್ಯ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ (1988)
* ದಿನಕರ ದೇಸಾಯಿ ಪ್ರತಿಷ್ಠಾನ ಪ್ರಶಸ್ತಿ (1989)
* ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ (1992)
* ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ (1995)
* ಕೆ.ವಿ. ಶಂಕರಗೌಡ ರಂಗಭೂಮಿ ಪ್ರಶಸ್ತಿ (1996)
* ಸಂದೇಶ ಮಾಧ್ಯಮ ಪ್ರಶಸ್ತಿ (1996)
* ಕರುನಾಡ ಭೂಷಣ ಪ್ರಶಸ್ತಿ (2006)
* ಆಳ್ವಾಸ್ ನುಡಿಸಿರಿ ಪ್ರಶಸ್ತಿ (2011)
* ಪಂಪ ಪ್ರಶಸ್ತಿ (2011)

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT