ಬೆಂಗಳೂರು: ‘ಭದ್ರಾವತಿಯಲ್ಲಿ ಆರ್‌ಎಎಫ್ ಘಟಕ ಸ್ಥಾಪಿಸಲು ಶನಿವಾರ ಹಾಕಿದ ಅಡಿಗಲ್ಲು ಫಲಕ ಹಿಂದಿ, ಆಂಗ್ಲ ಭಾಷೆಯಲ್ಲಿದ್ದು, ಕನ್ನಡವನ್ನು ನಿರ್ಲಕ್ಷಿಸಲಾಗಿದೆ’ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ಅಡಿಗಲ್ಲು ಫಲಕ ಹಿಂದಿ ಮತ್ತು ಆಂಗ್ಲ ಭಾಷೆಯಲ್ಲಿ ಮಾತ್ರವಿದೆ. ಕನ್ನಡವನ್ನು ಕಡೆಗಣಿಸಿರುವುದನ್ನು ತೀವ್ರವಾಗಿ ಖಂಡಿಸುತ್ತೇನೆ. ರಾಜ್ಯದಲ್ಲಿ ಹಿಂದಿ ಹೇರಿಕೆ ಅಷ್ಟು ಸುಲಭವಲ್ಲ’ ಎಂದು ಸಿದ್ದರಾಮಯ್ಯ ಸುದ್ದಿಗಾರರಿಗೆ ತಿಳಿಸಿದರು.

‘ಕಾರ್ಯಕ್ರಮ ನಡೆದಿರುವುದು ಕರ್ನಾಟಕದಲ್ಲಿ. ಹೀಗಾಗಿ, ಕನ್ನಡ ಭಾಷಾ ಬಳಕೆ ಇರಲೇಬೇಕಿತ್ತು. ಕನ್ನಡ ಭಾಷೆ ಬಳಸದೆ ಇರುವುದು ಅಪರಾಧ’ ಎಂದರು.

ಕುಮಾರಸ್ವಾಮಿ ಕಿಡಿ:‘ಅಡಿಗಲ್ಲು ಫಲಕವನ್ನು ಅಮಿತ್ ಶಾ ಅನಾವರಣಗೊಳಿಸಿದ್ದಾರೆ. ಅದರಲ್ಲಿ ಹಿಂದಿಮತ್ತು ಇಂಗ್ಲಿಷ್ ಭಾಷೆ ಮಾತ್ರ ಕಾಣಿಸುತ್ತವೆ. ಇಲ್ಲಿ ಕನ್ನಡದ ಅವಗಣನೆ ನಿಚ್ಚಳವಾಗಿ ತೋರುತ್ತದೆ’ ಎಂದು ಎಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

‘ವೈವಿಧ್ಯ ಭಾರತವು ತ್ರಿಭಾಷಾ ಸೂತ್ರ ಅಳವಡಿಸಿಕೊಂಡಿದೆ. ಆಯಾ ರಾಜ್ಯಭಾಷೆಗಳನ್ನು ಗೌರವಿಸುವುದು ಕೇಂದ್ರ ಸರ್ಕಾರದ ಕರ್ತವ್ಯ. ಗೃಹ ಸಚಿವರೇ ತ್ರಿಭಾಷಾ ಸೂತ್ರ ಧಿಕ್ಕರಿಸಿರುವುದು ಕನ್ನಡಕ್ಕೆ, ಕನ್ನಡಿಗರಿಗೆ ಮಾಡಿದ ಅಗೌರವ. ರಾಜ್ಯದ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳು ನಾಡು–ನುಡಿಯ ಘನತೆಯನ್ನು ಮರೆತದ್ದು ಖಂಡನೀಯ’ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.