ಶುಕ್ರವಾರ, ಮೇ 20, 2022
19 °C

ಆಹಾರ ವಿತರಕರಿಂದ ಕನ್ನಡ ಕಡೆಗಣನೆ: ಕ್ರಮಕ್ಕೆ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಗ್ರಾಹಕರಿಗೆ ಸಿದ್ಧ ಆಹಾರ ತಲುಪಿಸುವ ಸ್ವಿಗ್ಗಿ ಸಂಸ್ಥೆಯ ಸಿಬ್ಬಂದಿಯಲ್ಲಿ ಹಿಂದಿ ಭಾಷಿಕರೂ ಇದ್ದಾರೆ. ಅವರಿಗೆ ಸಂಸ್ಥೆ ಕನ್ನಡ ಕಲಿಸದಿರುವುದರಿಂದ ಗ್ರಾಹಕರು ಸಮಸ್ಯೆ ಎದುರಿಸುತ್ತಿದ್ದಾರೆ’ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಆಕ್ಷೇಪ ವ್ಯಕ್ತಪಡಿಸಿದೆ. 

ಈ ಬಗ್ಗೆ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್.ನಾಗಾಭರಣ ಅವರು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರ ಇಲಾಖೆ ಆಯುಕ್ತರಿಗೆ ಪತ್ರ ಬರೆದಿದ್ದಾರೆ. ಸಂಸ್ಥೆಯು ಕನ್ನಡ ಕಡೆಗಣಿಸುತ್ತಿರುವ ಬಗ್ಗೆ ಪ್ರಭಾಕರ್ ಎಂಬುವರು ಪ್ರಾಧಿಕಾರಕ್ಕೆ ದೂರು ನೀಡಿದ್ದರು. 

‘ಸ್ವಿಗ್ಗಿ ಸಂಸ್ಥೆಯು ಕನ್ನಡ ಬಾರದ ಅನ್ಯ ಭಾಷಿಕರಿಗೆ ಕನ್ನಡ ಕಲಿಸುವ ಪ್ರಯತ್ನ ಮಾಡುತ್ತಿಲ್ಲ. ಕೆಲಸ ಮಾಡುವ ಕೆಲವರು ಹಿಂದಿ ಭಾಷೆಯನ್ನಷ್ಟೇ ಬಲ್ಲವರಾಗಿದ್ದಾರೆ. ಇವರು ಕನ್ನಡದಲ್ಲಿ ಸಂವಹನ ನಡೆಸುತ್ತಿಲ್ಲ. ಅಷ್ಟೇ ಅಲ್ಲ, ‘ನಮಗೆ ಕನ್ನಡ ಬರುವುದಿಲ್ಲ. ಹಿಂದಿಯಲ್ಲೇ ಮಾತನಾಡಬೇಕು ಎಂಬ ಬೇಡಿಕೆ ಇಡುತ್ತಿದ್ದಾರೆ ಎಂದು ದೂರುದಾರರು ತಿಳಿಸಿದ್ದಾರೆ’ ಎಂದು ಪತ್ರದಲ್ಲಿ
ಉಲ್ಲೇಖಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು